ದೇಶ

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ

Srinivas Rao BV

ನವದೆಹಲಿ: ಕಳೆದ ವಾರ ಏಮ್ಸ್ ಗೆ ದಾಖಲಾಗಿದ್ದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. 

ಆ.18 ರಂದು ಆಸ್ಪತ್ರೆಯ ಮೂಲಗಳಿಂದ ಬಂದಿರುವ ಮಾಹಿತಿಗಳ ಪ್ರಕಾರ, ಅರುಣ್ ಜೇಟ್ಲಿಗೆ  ಎಕ್ಸ್ಟ್ರಾ ಕಾರ್ಪೋರಿಯಲ್ ಮೆಂಬ್ರೇನ್ ಆಕ್ಸಿಜನೇಷನ್ (ಇಸಿಎಂಒ) ಹಾಗೂ ಐಎಬಿಪಿ ಮೂಲಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದ್ದು,  ಡಯಾಲಿಸಿಸ್ ಚಿಕಿತ್ಸೆಗೆ ಮುಂದಾಗಿದ್ದಾರೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಅರುಣ್ ಜೇಟ್ಲಿ ಅವರನ್ನು ಆ.೦9 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

SCROLL FOR NEXT