ಚಿದಂಬರಂ 
ದೇಶ

ಯುಪಿಎ ಅವಧಿಯ ವಿಮಾನಯಾನ ಹಗರಣ: ಚಿದಂಬರಂಗೆ ಇಡಿ ಸಮನ್ಸ್

ಯುಪಿಎ ಆಡಳಿತಾವಧಿಯಲ್ಲಿ ನಡೆದಿದ್ದ ವಿಮಾನಯಾನ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ನಡೆದಿದ್ದ ವಿಮಾನಯಾನ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬಹುಕೋಟಿ ವಿಮಾನಯಾನ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 23ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಚಿದಂಬರಂ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಗೆ ಏರ್ ಸ್ಲಾಟ್‌ಗಳನ್ನು ನಿಗದಿಪಡಿಸುವಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಇದರಿಂದ ಏರ್ ಇಂಡಿಯಾ ಭಾರಿ ನಷ್ಟ ಅನುಭವಿಸಿತ್ತು.

ಈ ಸಂಬಂಧ ಈಗಗಾಲೇ ಮಾಜಿ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರನ್ನು ಸಹ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದೆ.

ಪ್ರಫುಲ್ ಪಟೇಲ್ ಹಗರಣದ ಪ್ರಮುಖ ಆರೋಪಿ ದೀಪಕ್ ತಲ್ವಾರ್ ಮತ್ತು ಅವರ ಪುತ್ರ ಆದಿತ್ಯ ತಲ್ವಾರ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪತ್ನಿಯ ಕಿರಾತಕ ಸಂಚು ಬಯಲು!

SCROLL FOR NEXT