ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟ್ರಕ್ ಗೆ ಬಸ್ ಢಿಕ್ಕಿ, 15 ಸಾವು

ಮಹಾರಾಷ್ಟ್ರದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಸ್ ಅಪಘಾತ
Srinivasa Murthy VN
Updated On : 19 Aug 2019, 10:34 am

ಧುಳೆಯ ನಿಮ್ಗುಲ್ ಬಳಿ ಘಟನೆ 35 ಮಂದಿಗೆ ಗಾಯ, ಢಿಕ್ಕಿ ರಭಸಕ್ಕೆ ಬಸ್ ಛಿದ್ರ

ಮುಂಬೈ: ಮಹಾರಾಷ್ಟ್ರದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಧುಳೆಯ ನಿಮ್ಗುಲ್ ನಲ್ಲಿ ಹೆದ್ದಾರಿಯಲ್ಲಿದ್ದ ಟ್ರಕ್ ಗೆ ಹಿಂದಿನಿದ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಇಡೀ ಬಸ್ ಛಿದ್ರವಾಗಿದೆ. ಅಂತೆಯೇ ಬಸ್ ನಲ್ಲಿ ಪ್ರಯಾಣಿಕರ ಪೈಕಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧುಳೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Advertisement

ಅಪಘಾತಕ್ಕೆ ಬಸ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement