ಉತ್ತರ ಭಾರತದಲ್ಲಿ ಮೇಘ ಸ್ಫೋಟ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗಂಗಾ-ಯಮುನಾ
ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಲಕ್ನೋ: ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಕೇಂದ್ರ ಜಲ ಆಯೋಗದ ಪ್ರಕಾರ, ಬದೌನ್ ನಲ್ಲಿ ಗಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಇದರ ಜೊತೆಗೆ ಶಾರದಾ ಗಾಗ್ರಾ ನದಿಗಳು ಕೂಡ ಉತ್ತರ ಪ್ರದೇಶದಲ್ಲಿ ಅಪಾಯ ಮಟ್ಟ ಮೀರಿವೆ,
ಕಲ್ಪಿಯಲ್ಲಿ ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು 12 ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಹೀಗಾಗಿ ಕಾರಿಫ್ ಬೆಳೆ ಸಂಪೂರ್ಣವಾಗಿ ಹಾಳಾಗಿದೆ,. ಹರ್ಯಾಣದ ಹತಿನಿ ಕುಂಡ್ ಬ್ಯಾರೇಜ್ ನಿಂದ ನೀರನ್ನು ಹೊರ ಬಿಟ್ಟ ಪರಿಣಾಮ ಯಮುನಾ ನದಿ ನೀರಿನ ಪ್ರಮಾಣ ಹೆಚ್ಚಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.