ದೇಶ

ಲೈಂಗಿಕ ಕಿರುಕುಳ: 6 ತಿಂಗಳಲ್ಲಿ ತರುಣ್ ತೇಜ್‌ಪಾಲ್ ವಿರುದ್ಧ ವಿಚಾರಣೆ ಮುಗಿಸಿ-ಗೋವಾ ಕೋರ್ಟ್ ಗೆ ಸುಪ್ರೀಂ ನಿರ್ದೇಶನ

Raghavendra Adiga

ನವದೆಹಲಿ: ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ತನ್ನ ವಿರುದ್ಧದ ಆರೋಪಗಳನ್ನು ರದ್ದುಪಡಿಸುವಂತೆ ತೆಹಲ್ಕಾ ನಿಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ತೇಜ್‌ಪಾಲ್ ವಿರುದ್ಧದ ಪ್ರಕರಣದಲ್ಲಿ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಲು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಗೋವಾದ ಕೆಳ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

2013 ರಲ್ಲಿ ಗೋವಾದ ಪಂಚತಾರಾ ಹೋಟೆಲ್‌ನ ಲಿಫ್ಟ್‌ನೊಳಗೆ ಮಾಜಿ ಮಹಿಳಾ ಸಹೋದ್ಯೋಗಿಯ ಮೇಲೆ ತೇಜ್‌ಪಾಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.

ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ತೇಜ್‌ಪಾಲ್ ಅವರನ್ನು ನವೆಂಬರ್ 30, 2013ರಂದು ಕ್ರೈಂ ಬ್ರ್ಯಾಂಚ್ ಪೋಲೀಸರು ಬಂಧಿಸಿದ್ದರು. ಆದರೆ ಬಳಿಕ ಜಾಮೀನು ಪಡೆದ ಅವರು ಅವರು ಮೇ 2014 ರಿಂದ ಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದಾರೆ

SCROLL FOR NEXT