ಡಾ ಮನಮೋಹನ್ ಸಿಂಗ್ 
ದೇಶ

ಅಸಹಿಷ್ಣುತೆ, ಕೋಮು ಧ್ರುವೀಕರಣದಿಂದ ದೇಶದ ಸಂಘಟನೆಗೆ ಧಕ್ಕೆ: ಡಾ.ಮನಮೋಹನ್ ಸಿಂಗ್ 

ಸಮಾಜದಲ್ಲಿ ಕಂಡುಬರುತ್ತಿರುವ ಅಹಿತಕರ ಬೆಳವಣಿಗೆಗಳಾದ ಅಸಹಿಷ್ಣುತೆ, ಕೋಮು ಧ್ರುವೀಕರಣ ಮತ್ತು ಕೆಲವು ಗುಂಪು ಘರ್ಷಣೆಯಿಂದ ಪ್ರಚೋದಿಸಲ್ಪಡುವ ಹಿಂಸಾತ್ಮಕ ಅಪರಾಧಗಳ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ಸಂಘಟಿತ ರಾಷ್ಟ್ರಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಸಮಾಜದಲ್ಲಿ ಕಂಡುಬರುತ್ತಿರುವ ಅಹಿತಕರ ಬೆಳವಣಿಗೆಗಳಾದ ಅಸಹಿಷ್ಣುತೆ, ಕೋಮು ಧ್ರುವೀಕರಣ ಮತ್ತು ಕೆಲವು ಗುಂಪು ಘರ್ಷಣೆಯಿಂದ ಪ್ರಚೋದಿಸಲ್ಪಡುವ ಹಿಂಸಾತ್ಮಕ ಅಪರಾಧಗಳ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ಸಂಘಟಿತ ರಾಷ್ಟ್ರಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.


ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 75ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ದೆಹಲಿಯಲ್ಲಿ ಸದ್ಭಾವನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ನಾವು ಪಾಲಿಸಲೇಬೇಕಾದ ಕರ್ತವ್ಯಗಳಿಗೆ ಇಂತಹ ಪ್ರವೃತ್ತಿಗಳು ಸಮಾಜದಲ್ಲಿ ಶಾಂತಿಯ ಉನ್ನತಿ, ರಾಷ್ಟ್ರೀಯ ಏಕತೆ ಮತ್ತು ಕೋಮು ಸೌಹಾರ್ದತೆಗಳಿಗೆ ಧಕ್ಕೆಯನ್ನುಂಟುಮಾಡುತ್ತವೆ ಎಂದರು.


ಇಂತಹ ಪ್ರವೃತ್ತಿಗಳನ್ನು ತಡೆಯಲು ನಾವು ಯಾವ ರೀತಿ ಕೊಡುಗೆ ನೀಡಬಹುದು ಎಂದು ನಾವೆಲ್ಲರೂ ಯೋಚಿಸಬೇಕಾಗಿದೆ. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT