ದೇಶ

ಐಎನ್‌ಎಕ್ಸ್‌  ಹಗರಣ: ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಚಿದಂಬರಂ

Lingaraj Badiger

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆಯಷ್ಟೇ ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರ.

ಚಿದಂಬರಂ ಪರ ವಕೀಲ ಕಪೀಲ್ ಸಿಬಲ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಆದಷ್ಟು ಬೇಗ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

2007ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಲ್ಲಿ ಕೆಲವು ಅವ್ಯವಹಾರ ಮೂಲಕ ಐಎನ್‌ಎಕ್ಸ್ ಮೀಡಿಯಾ ಹೌಸ್‌ಗೆ "ನೆರವು' ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದು, 305 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು 2007ರಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಸಂಬಂಧ ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಎರಡು ಪ್ರಕರಣ ದಾಖಲಿಸಲಾಗಿದೆ. 

SCROLL FOR NEXT