ದೇಶ

ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶಿ ಮಂತ್ರ ಜಪಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ 

Nagaraja AB

ನವದೆಹಲಿ: ವಾಯುಪಡೆಯನ್ನು  ಆಧುನೀಕರಿಸುವ ಸಲುವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ವಿದೇಶಿ ಉತ್ಪಾದಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿಂದು ಭಾರತೀಯ ವಾಯುಪಡೆ ಆಧುನೀಕರಣ ಮತ್ತು ಸ್ವದೇಶಿ ಯೋಜನೆ ವಿಚಾರ ಕುರಿತು ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುದ್ದೋಪಕರಣಗಳಿಗಾಗಿ ವಿದೇಶಿ ತಯಾರಕರ ಮೇಲಿನ ಅವಲಂಬನೆ ಸಾಕಷ್ಟಿದೆ. ಇಂತಹ ಅವಲಂಬನೆಯನ್ನು ಕಡಿಮೆ ಮಾಡಿ ನಾವೇ  ನಮ್ಮ ಸಾಮರ್ಥ್ಯದಿಂದ ಅಂತಹ ಉಪಕರಣಗಳನ್ನು ತಯಾರಿಸಿಕೊಳ್ಳುವಂತಾಗಬೇಕು ಎಂದರು. 

ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಉದ್ಯಮಗಳ ಹೂಡಿಕೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಮೂಲಸೌಕರ್ಯ ಅಭಿವೃದ್ದಿ ಹಾಗೂ ಸ್ವದೇಶಿ ಅಭಿವೃದ್ಧಿ ಪ್ರೋತ್ಸಾಹಕ್ಕಾಗಿ  ಹಲವಾರು ನೀತಿಗಳನ್ನು ಜಾರಿಗೊಳಿಸಲಾಗಿದೆ. ರಕ್ಷಣಾ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಗಮನಾರ್ಹ ಅಭಿವೃದ್ಧಿಯನ್ನು ತರಲು ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಉತ್ಪನ್ನಗಳನ್ನು ಉತ್ತೇಜಿಸಬೇಕಾಗಿದೆ ಎಂದು ಹೇಳಿದರು.

SCROLL FOR NEXT