ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ಅರ್ಜಿ ತುರ್ತು ವಿಚಾರಣೆ ಸಾಧ್ಯವಿಲ್ಲ, ಸಿಜೆಐ ಪರಿಗಣನೆ ಅವಶ್ಯಕ; ಸುಪ್ರೀಂ ಕೋರ್ಟ್

Sumana Upadhyaya

ನವದೆಹಲಿ: ಐಎನ್ಎಕ್ಸ್ ಮೀಡಿಯಾ ವಂಚನೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸದಂತೆ ಕೇಂದ್ರ ಸರ್ಕಾರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಅರ್ಜಿ ವಿಚಾರಣೆ ಸಂಬಂಧ ಪರಿಗಣಿಸುವುದು ಅವಶ್ಯಕ ಎಂದು ಹೇಳಿದೆ.


ಚಿದಂಬರಂ ಪರವಾಗಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಗೆ ಈ ವಿಷಯ ತಿಳಿಸಿದ ನ್ಯಾಯಾಧೀಶ ಎನ್ ವಿ ರಮಣ, ಕೇಸಿನ ತುರ್ತು ವಿಚಾರಣೆ ಬಗ್ಗೆ ತೀರ್ಮಾನಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮುಂದೆ ಕೇಸನ್ನು ಮಂಡಿಸುತ್ತಿರುವುದಾಗಿ ತಿಳಿಸಿದರು.


ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ರಾಮಜನ್ಮ ಭೂಮಿ-ಬಾಬ್ರಿ ಮಸೀದಿ ಕೇಸಿನ ವಿಚಾರಣೆ ನಡೆಸುತ್ತಿರುವುದರಿಂದ ಚಿದಂಬರಂ ಅವರ ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದ ಪಟ್ಟಿಯಲ್ಲಿದೆ.


ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿರುವುದರಿಂದ ಅವರನ್ನು ತಕ್ಷಣ ಬಂಧಿಸಬಾರದೆಂದು ಚಿದಂಬರಂ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಸಿಬಿಐಗೆ ಮನವಿ ಮಾಡಿತ್ತು.


ಐಎನ್ ಎಕ್ಸ್ ಮೀಡಿಯಾ ವಂಚನೆ ಪ್ರಕರಣದಲ್ಲಿ ಚಿದಂಬರಂ ಬಂಧಿಸುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದ ತಕ್ಷಣವೇ ಸಿಬಿಐ ನಿನ್ನೆ ಅವರ ನಿವಾಸಕ್ಕೆ ದಾಳಿ ಮಾಡಿತ್ತು. ಆದರೆ ಚಿದಂಬರಂ ಅಷ್ಟು ಹೊತ್ತಿಗೆ ತಮ್ಮ ನಿವಾಸದಿಂದ ಕಾಣೆಯಾಗಿದ್ದರು. ಅದಾದ ಎರಡು ಗಂಟೆಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಚಿದಂಬರಂಗೆ ಸಿಬಿಐ ನೊಟೀಸ್ ಜಾರಿ ಮಾಡಿತ್ತು. 

SCROLL FOR NEXT