ಉರುಳಿಬಿದ್ದ ಟ್ರಕ್ 
ದೇಶ

ರಾಜಸ್ಥಾನ: ವಾಯುಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್​ ಕಂದಕಕ್ಕೆ ಉರುಳಿ ಮೂವರು ಸಾವು

ಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ​ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್​ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಬಾರ್ಮರ್​: ಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ​ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್​ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ರಾಜಸ್ಥಾನದ ಬಾರ್ಮರ್​ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈ ಬಗ್ಗೆ ಬಾರ್ಮರ್​ ಜಿಲ್ಲೆಯ ಎಸ್​ಪಿ ಶಿವರಾಜ್​ ಮೀನಾ ಮಾಹಿತಿ ನೀಡಿದ್ದು, ಟ್ರಕ್​ನಲ್ಲಿ ಒಟ್ಟು ಎಂಟು ಮಂದಿ ಯೋಧರು ಪ್ರಯಾಣಿಸುತ್ತಿದ್ದರು. ಇವರೆಲ್ಲ ಚೌಹತನ್​ ಪಟ್ಟಣದಲ್ಲಿರುವ ಸೇನಾಪಡೆಯ ವಿಮಾನ ನಿಲ್ದಾಣದಿಂದ ಆಗಮಿಸುತ್ತಿದ್ದರು. ಟ್ರಕ್​ ಸಮತೋಲನ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು ಹೇಳಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್