ಇಂದ್ರಾಣಿ ಮುಖರ್ಜಿ-ಚಿದಂಬರಂ 
ದೇಶ

ಚಿದಂಬರಂ ಬಂಧನಕ್ಕೆ ಇಂದ್ರಾಣಿ ಹೇಳಿಕೆಯೇ ಪ್ರಮುಖ ಸಾಕ್ಷಿ, ಆಧಾರ !!

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಮತ್ತು ಇಡಿ ತನಿಖಾ ಅಧಿಕಾರಿಗಳ ಮುಂದೆ ಇಂದ್ರಾಣಿ ಮುಖರ್ಜಿ ನೀಡಿದ್ದ ಹೇಳಿಕೆಯೇ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಂಧನಕ್ಕೆ ಪ್ರಮುಖ ಅಸ್ತ್ರ, ಆಧಾರ, ಸಾಕ್ಷಿಯಾಯಿತು ಎನ್ನಲಾಗಿದೆ.

ಇಂದ್ರಾಣಿ ಮುಖರ್ಜಿಮತ್ತು ಅವರ ಪತಿ ಪೀಟರ್ ಮುಖರ್ಜಿ ಅವರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನೀಡಿದ್ದ ಹೇಳಿಕೆಯಲ್ಲಿ ಆಗಿನ ಹಣಕಾಸು ಸಚಿವ ಚಿದಂಬರಂ ಅವರನ್ನು ತಮ್ಮ ಉತ್ತರ ಬ್ಲಾಕ್ ಕಚೇರಿಯಲ್ಲಿ ಭೇಟಿಯಾಗಿದ್ದಾಗಿಯೂ ನಂತರ ಅವರ ಪುತ್ರ ಕಾರ್ತಿ ಅವರನ್ನು ಭೇಟಿಯಾಗಿ ವ್ಯವಹಾರದಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದ್ದ ವಿಷಯ ತಿಳಿಸಿದ್ದರು. ಇದು ಚಿದು ಬಂಧನಕ್ಕೆ ಪುಷ್ಟಿ ಕೊಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ರ ಕಾರ್ತಿಯವರನ್ನು ಬಂಧಿಸಿ ನಂತರ ಬಿಡಗಡೆ ಮಾಡಲಾಗಿದೆ.

ಇಂದ್ರಾಣಿ ಮಾಫಿ ಸಾಕ್ಷಿ
ಪ್ರಕರಣದಲ್ಲಿ ಮಾಫಿಸಾಕ್ಷಿ (ಅಪ್ರೂವರ್) ಆಗಲು ಇಂದ್ರಾಣಿ ಮುಖರ್ಜಿಗೆ ದೆಹಲಿ ಕೋರ್ಟ್ ಕಳೆದ ತಿಂಗಳು ಅನುಮತಿ ನೀಡಿತ್ತು. ಮಾಫಿಸಾಕ್ಷಿ ಆಗಿ, ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನೀಡಿದರೆ ತಮಗೆ ಕ್ಷಮಾದಾನ ನೀಡುವಂತೆ ಕೋರ್ಟ್‌ ಗೆ ಇಂದ್ರಾಣಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT