ರಫೆಲ್ ಯುದ್ಧ ವಿಮಾನ 
ದೇಶ

ಸೆಪ್ಟೆಂಬರ್ ನಲ್ಲಿ ರಫೆಲ್ ಯುದ್ಧ ವಿಮಾನ ಭಾರತಕ್ಕೆ ಆಗಮನ 

ತೀವ್ರ ವಿವಾದ ಸೃಷ್ಟಿಸಿದ್ದ ಫ್ರಾನ್ಸ್ ನ ರಫೇನ್ ಯುದ್ಧ ವಿಮಾನ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದೆ. 

             ಸೆಪ್ಟೆಂಬರ್ 20ಕ್ಕೆ ಭಾರತಕ್ಕೆ ಹಸ್ತಾಂತರ 

ನವದೆಹಲಿ: ತೀವ್ರ ವಿವಾದ ಸೃಷ್ಟಿಸಿದ್ದ ಫ್ರಾನ್ಸ್ ನ ರಫೇನ್ ಯುದ್ಧ ವಿಮಾನ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದೆ. ಭಾರತೀಯ ವಾಯುಪಡೆಗೆ 36 ರಫೇಲ್ ಯುದ್ಧ ವಿಮಾನಗಳನ್ನು ಬರಮಾಡಿಕೊಳ್ಳಲು ಮುಂದಿನ ತಿಂಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ಪ್ಯಾರಿಸ್ ಗೆ ಪ್ರಯಾಣ ಬೆಳೆಸಲಿದ್ದಾರೆ.


ರಫೆಲ್ ಯುದ್ಧ ವಿಮಾನ ತಯಾರಿಸಿದ ಫ್ರಾನ್ಸ್ ನ ಡಸ್ಸೌಲ್ಟ್ ವಿಮಾನಯಾನದ ಹಿರಿಯ ಅಧಿಕಾರಿಗಳು ಮತ್ತು ಮಿಲಿಟರಿಯ ಉನ್ನತ ಅಧಿಕಾರಿಗಳು ಯುದ್ಧ ವಿಮಾನದ ಹಸ್ತಾಂತರ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಈ ಸಮಾರಂಭ ಸೆಪ್ಟೆಂಬರ್ 20ರಂದು ನಡೆಯಲಿದೆ.


ಮುಂದಿನ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭಾರತ-ಫ್ರಾನ್ಸ್ ದ್ವಿಪಕ್ಷೀಯ ಮಾತುಕತೆ ಭಾಗವಾಗಿ ಪ್ಯಾರಿಸ್ ಗೆ ಭೇಟಿ ಕೊಡಲಿದ್ದಾರೆ. ಭಾರತೀಯ ವಾಯುಪಡೆಯ ಉನ್ನತ ಮಟ್ಟದ ಅಧಿಕಾರಿಗಳ ತಂಡ ಈಗಾಗಲೇ ಪ್ಯಾರಿಸ್ ನಲ್ಲಿದ್ದು ಹಸ್ತಾಂತರ ಪ್ರಕ್ರಿಯೆ ಸಮಾರಂಭದಲ್ಲಿ ಅಲ್ಲಿನ ಅಧಿಕಾರಿಗಳ ಜೊತೆ ಸಮನ್ವಯ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.


ಸುಮಾರು 58 ಸಾವಿರ ಕೋಟಿ ರೂಪಾಯಿ ವೆಚ್ಚದ 36 ರಫೆಲ್ ಯುದ್ಧ ವಿಮಾನ ಖರೀದಿಗೆ ಭಾರತ ಸರ್ಕಾರ 2016ರ ಸೆಪ್ಟೆಂಬರ್ ನಲ್ಲಿ ಫ್ರಾನ್ಸ್ ಸರ್ಕಾರದೊಂದಿಗೆ ಅಂತರ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.


ರಫೆಲ್ ಯುದ್ಧ ವಿಮಾನ ಅತ್ಯಾಧುನಿಕ ಶಸ್ತ್ರಾಸ್ತ್ರ ಮತ್ತು ಕ್ಷಿಪಣಿಗಳನ್ನು ಯುದ್ಧದ ವೇಳೆ ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿರುತ್ತದೆ. ಈ ಯುದ್ಧ ವಿಮಾನ ಚಲಾಯಿಸಲು ಭಾರತೀಯ ವಾಯುಪಡೆಯ ಪೈಲಟ್ ಗಳಿಗೆ ಬೇಕಾದ ತರಬೇತಿ ಮತ್ತು ಮೂಲಭೂತ ಸೌಕರ್ಯಗಳನ್ನು ಈಗಾಗಲೇ ನೀಡಲಾಗಿದೆ. ಮೊದಲ ರಫೆಲ್ ಯುದ್ಧ ವಿಮಾನವನ್ನು ಹರ್ಯಾಣ ರಾಜ್ಯದ ಅಂಬಾಲಾ ವಾಯುನೆಲೆಯಲ್ಲಿ ನಿಯೋಜಿಸಲು ಭಾರತೀಯ ವಾಯುಪಡೆ ಸಿದ್ಧತೆ ಮಾಡಿಕೊಂಡಿದೆ. 


ಸುಮಾರು 220 ಕಿಲೋ ಮೀಟರ್ ವ್ಯಾಪ್ತಿಯನ್ನು ಹೊಂದಿರುವ ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ರಫೇಲ್‌ ಯುದ್ಧ ವಿಮಾನದ ಎರಡನೇ ಸ್ಕ್ವಾಡ್ರನ್ ಪಶ್ಚಿಮ ಬಂಗಾಳದ ಹಸಿಮಾರ ವಾಯುನೆಲೆಯಲ್ಲಿ ಬೀಡುಬಿಡಲಿದೆ. ಈ ಎರಡೂ ವಾಯುನೆಲೆಯಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಬೇಕಾದ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿಪಡಿಸಲು ಭಾರತೀಯ ವಾಯುಪಡೆ ಸುಮಾರು 400 ಕೋಟಿ ರೂಪಾಯಿ ಖರ್ಚು ಮಾಡಿದೆ. 


ಈ ಒಪ್ಪಂದವಾದಾಗಿನಿಂದ ಕಾಂಗ್ರೆಸ್ ಪಕ್ಷ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಾ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?