ದೇಶ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕಾರ

Nagaraja AB

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯನಾಯ್ಡು ಮನಮೋಹನ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸಭಾಪತಿ ಅವರ ಕೊಠಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್, ಅಹ್ಮದ್ ಪಟೇಲ್, ಆನಂದ್ ಶರ್ಮಾ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಕೆಲ ಬಿಜೆಪಿ ನಾಯಕರು ಕೂಡಾ  ಭಾಗವಹಿಸಿದರು. 

86 ವರ್ಷದ ಮನಮೋಹನ್ ಸಿಂಗ್, ರಾಜಸ್ತಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಅವರನ್ನು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಮಾಡಲಾಗಿತ್ತು. ಮನ್ ಮೋಹನ್ ಸಿಂಗ್ ವಿರುದ್ಧ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ.

ಈ ವರ್ಷದ ಜೂನ್ 14 ರಂದು ಮೇಲ್ಮನೆ ಸದಸ್ಯ ಸ್ಥಾನದಿಂದ ನಿವೃತ್ತಿ ಪಡೆದಿದ್ದ ಮನಮೋಹನ್ ಸಿಂಗ್ ಈಗ ಮತ್ತೊಮ್ಮೆ ರಾಜ್ಯಸಭೆಗೆ ಹಿಂದಿರುಗಿದ್ದಾರೆ. ಈ ಹಿಂದೆ ಧೀರ್ಘ ವರ್ಷಗಳ ಕಾಲ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿದ್ದರು.

SCROLL FOR NEXT