ದೇಶ

'ವಿಧಿ 370 ಕುರಿತಂತೆ ಕಾಂಗ್ರೆಸ್ ನಾಯಕರ ಉತ್ತರ ಕೇಳಿದರೆ, ಜನರೇ ಚಪ್ಪಲಿಯಲ್ಲಿ ಹೊಡೆಯುತ್ತಾರೆ'

Srinivasamurthy VN

ಕಾಂಗ್ರೆಸ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಆಕ್ರೋಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ವಿಧಿ 370ರ ಕುರಿತಂತೆ ಕಾಂಗ್ರೆಸ್ ನಾಯಕರ ಉತ್ತರ ಕೇಳಿದರೆ ಜನರೇ ಚಪ್ಪಲಿಯಲ್ಲಿ ಹೊಡೆಯುತ್ತಾರೆ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತ್ಯಪಾಲ್ ಮಲ್ಲಿಕ್ ಅವರು, ವಿಧಿ 370ರ ರದ್ಧತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರಿಗೇ ತಾವೇಕೆ ವಿಧಿ 370ರ ರದ್ಧತಿಯನ್ನು ವಿರೋಧಿಸುತ್ತಿದ್ದೇವೆ ಎಂದು ಸ್ಪಷ್ಟವಾಗಿ ತಿಳಿದಿಲ್ಲ. ಈ ಕುರಿತಂತೆ ಅವರ ಪ್ರತಿಕ್ರಿಯೆ ಕೇಳಿದರೆ ಜನರೇ ಚಪ್ಪಲಿಯಲ್ಲಿ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಎಂದೂ ತಮ್ಮ ನಿರ್ಧಾರ ಸ್ಪಷ್ಟಪಡಿಸಿಲ್ಲ. ಕೇವಲ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು  ಹೇಳಿದ್ದಾರೆ.

ಅಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಮಾತನಾಡಿದ ಸತ್ಯಪಾಲ್ ಮಲ್ಲಿಕ್ ಅವರು, ಲೋಕಸಭೆಯಲ್ಲಿ ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಚರ್ಚಿಸಬೇಕು ಎಂದು ಹೇಳಿದಾಗ ರಾಹುಲ್ ಗಾಂಧಿ ಅವರನ್ನು ತಡೆದು ಅವರನ್ನು ತರಾಟೆಗೆ ತೆಗೆದುಕೊಳ್ಳಬೇಕಿತ್ತು. ಅಲ್ಲದೆ ಆಗಲೇ ಅವರು ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ತಮ್ಮ ನಿರ್ಧಾರ ಸ್ಪಷ್ಟಪಡಿಸಬೇಕಿತ್ತು. ಆದರೆ ಆಗ ಈ ಬಗ್ಗೆ ಮಾತನಾಡದ ರಾಹುಲ್ ಗಾಂಧಿ ಈಗ ರಾಜಕೀಯ ದುರಾಸೆಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಂದು ಅರ್ಥದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಬಾಲಾಪರಾಧಿಗಳಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

SCROLL FOR NEXT