ದೇಶ

ಸಿಬಿಐ ಬಂಧನದಲ್ಲಿರುವ ಚಿದಂಬರಂಗೆ ಸೆ.5ರವರೆಗೆ ಇಡಿಯಿಂದ ರಿಲೀಫ್!

Vishwanath S

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಸದ್ಯ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಸಿಬಿಐ ವಶದಲ್ಲಿದ್ದು ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ಸೆಪ್ಟೆಂಬರ್ 5ರವರೆಗೂ ಕಾಯುವಂತೆ ಸುಪ್ರೀಂ ಹೇಳಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ನಿರ್ಧರಿಸಿತ್ತು. ಈ ಸಂಬಂಧ ಚಿದಂಬರಂ ನಿರೀಕ್ಷಣಾ ಜಾಮೀನು ಕೋರಿದ್ದರು. ಈ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಇನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ಪ್ರಶ್ನಿಸಿ ಚಿದಂಬರಂ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 2ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ಇನ್ನು ಸೆ.2ರಂದು ಚಿದಂಬರಂಗೆ ಕೋರ್ಟ್ ಜಾಮೀನು ನೀಡಿದರೆ ನಂತರ ಇಡಿ ತನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

SCROLL FOR NEXT