ತಮಿಳುನಾಡಿನಲ್ಲಿ ಎನ್ ಐಎ ದಾಳಿ: ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳು ವಶ
ತಮಿಳುನಾಡಿನ 5 ಸ್ಥಳಗಳಲ್ಲಿ ಎನ್ ಐಎ ದಾಳಿ ನಡೆದಿದ್ದು, ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚೆನ್ನೈ: ತಮಿಳುನಾಡಿನ 5 ಸ್ಥಳಗಳಲ್ಲಿ ಎನ್ ಐಎ ದಾಳಿ ನಡೆದಿದ್ದು, ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲಷ್ಕರ್ ಸಂಘಟನೆಯ ಉಗ್ರರು ಪಾಕಿಸ್ತಾನದಿಂದ ಶ್ರೀಲಂಕಾ ಮೂಲಕ ಭಾರತದೊಳಗೆ ನುಸುಳಿರುವುದರ ಬಗ್ಗೆ ಮಾಹಿತಿ ಪಡೆದ ಎನ್ಐಎ ತಂಡ ಕೊಯಮತ್ತೂರು ಜಿಲ್ಲೆ ಸೇರಿದಂತೆ 5 ಪ್ರದೇಶಗಳಲ್ಲಿ ಎನ್ ಐಎ ದಾಳಿ ನಡೆಸಿದ್ದು ಈ ವರೆಗೂ ಹಲವು ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಧಾರ್ಮಿಕ ಹಾಗೂ ಇನ್ನಿತರ ಜನಸಂದಣಿ ಇರುವ ಪ್ರದೇಶಗಳಲ್ಲಿ ಉಗ್ರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಆಧಾರದಲ್ಲಿ ಎನ್ಐಎ ದಾಳಿ ನಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.