ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅತಿಕ್ರಮಣಕಾರರು! 
ದೇಶ

'ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅತಿಕ್ರಮಣಕಾರರು'!

ದೇಶದ ಭದ್ರತೆ ವಿಚಾರವಾಗಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 

ನವದೆಹಲಿ: ದೇಶದ ಭದ್ರತೆ ವಿಚಾರವಾಗಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 

ಎನ್ ಆರ್ ಸಿಯನ್ನು ವಿರೋಧಿಸುವ ಭರದಲ್ಲಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಮೋದಿ ಹಾಗೂ ಅಮಿತ್ ಶಾ ಒಳನುಸುಳುಕೋರರು ಎಂದು ಹೇಳಿದ್ದಾರೆ. 

ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಮೂಲತಃ ಗುಜರಾತ್ ನವರು ಆದರೆ ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಭಾರತ ಎಲ್ಲರಿಗೂ ಸೇರಿದೆ. ಇದೇನು ಖಾಸಗಿ ಆಸ್ತಿಯೇನು? ಇಲ್ಲಿರುವ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ, ಮಿಸ್ಟರ್ ಮೋದಿ, ಮಿಸ್ಟರ್ ಅಮಿತ್ ಶಾ, ನೀವೇ ಒಳನುಸುಳುಕೋರರು, ಅತಿಕ್ರಮಣಕಾರರು, ನಿಮ್ಮ ಮನೆ ಇರೋದು ಗುಜರಾತ್ ನಲ್ಲಿ ದೆಹಲಿಗೆ ಬಂದಿದ್ದೀರ ನೀವೂ ಸಹ ವಲಸಿಗರೇ... ಎಂದು ಚೌಧರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕೇಂದ್ರ ಸರ್ಕಾರ ದೇಶಾದ್ಯಂತ ಎನ್ ಆರ್ ಸಿಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದು, ಎನ್ ಆರ್ ಸಿ ಜಾರಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಈ ಹೇಳಿಕೆ ಮೂಲಕ ಮತ್ತೊಮ್ಮೆ ತೀವ್ರ ಟೀಕೆಗೆ ಗುರಿಯಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT