ದೇಶ

ಕ್ಷುಲಕ ಕಾರಣಕ್ಕೆ ಗಲಾಟೆ; ಸಹೋದ್ಯೋಗಿ ಗುಂಡಿಗೆ ಆರು ಐಟಿಬಿಪಿ ಯೋಧರ ಬಲಿ, ಹಲವರಿಗೆ ಗಾಯ

Srinivasamurthy VN

ರಾಯ್ ಪುರ: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಐಟಿಬಿಪಿ (ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್) ಯೋಧರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಡದಲ್ಲಿ ನಡೆದಿದೆ.

ಛತ್ತೀಸ್‌ಗಡದ ನಾರಾಯಣಪುರ ಜಿಲ್ಲೆಯ ಐಟಿಬಿಪಿಯ 45 ನೇ ಬೆಟಾಲಿಯನ್‌ನ ಕಡೇನಾರ್ ಶಿಬಿರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸಿಬ್ಬಂದಿಯ ಗುಂಡೇಟಿಗೆ ಐಟಿಬಿಪಿಯ 45 ನೇ ಬೆಟಾಲಿಯನ್‌ನ ಕಡೇನಾರ್ ಶಿಬಿರದ 6 ಮಂದಿ ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. 

ರಾಜ್ಯ ರಾಜಧಾನಿ ರಾಯ್‌ಪುರದಿಂದ 350 ಕಿ.ಮೀ ದೂರದಲ್ಲಿರುವ ನಾರಾಯಣಪುರ ಜಿಲ್ಲೆಯ ಐಟಿಬಿಪಿ ಶಿಬಿರದಲ್ಲಿ ಈ ಘಟನೆ ವರದಿಯಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ಶ್ರೇಣಿ) ಸುಂದರರಾಜ್ ಪಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಇತರ ಯೋಧರು ಸಾವನ್ನಪ್ಪಿದ ಬಳಿಕ ಗುಂಡು ಹಾರಿಸಿದ್ದ ಯೋಧ ಕೂಡ ತನಗೆ ತಾನೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಐಟಿಬಿಪಿ ಜವಾನ್ ತನ್ನ ಸಹೋದ್ಯೋಗಿಗಳಿಗೆ ತನ್ನ ಸೇವಾ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿದ್ದು, ಅವರಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಗಾಯಗೊಂಡ ಸೈನಿಕರನ್ನು ಹೆಲಿಕಾಪ್ಟರ್ ಮೂಲಕ ರಾಯಪುರಕ್ಕೆ ಕರೆತರಲಾಗಿದೆ. ಆದರೆ ಈ ಘಟನೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.  ಯಾವ ಕಾರಣಕ್ಕಾಗಿ ಆತ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ರಜೆ ನೀಡದ ಕಾರಣ ಆತ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಐಜಿಪಿ ಸುಂದರ್‌ ರಾಜ್ ಎಸ್ ಅವರು ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿಯು ಕೆಲವೇ ಹೊತ್ತಿನಲ್ಲಿ ಹೊರಬೀಳಲಿದೆ.  ಛತ್ತೀಸ್‌ಗಡ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ತಂಡ ಘಟನಾ ಸ್ಥಳಕ್ಕೆ ಧಾವಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ.

SCROLL FOR NEXT