ದೇಶ

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತ: ನಾಲ್ವರು ಯೋಧರು ಹುತಾತ್ಮ

Lingaraj Badiger

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಹಿಮಪಾತದಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ ಸಂಜೆ ಗಡಿ ನಿಯಂತ್ರಣಾ ರೇಖೆಯಲ್ಲಿನ ಕರ್ನಾ ಸೆಕ್ಟರ್ ನಲ್ಲಿಲ್ಲಿ ಭಾರಿ ಹಿಮಪಾದಿಂದ ಈಗಲ್ ಶಿಬಿರದ ನಾಲ್ವರು ಕೊಚ್ಚಿ ಹೋಗಿದ್ದರು. ಹತ್ತಿರದಲ್ಲೇ ಇದ್ದ ಇತರ ಸೇನಾ ಶಿಬಿರದ ಯೋಧರು ಭಾರೀ ಶೋಧ ಕಾರ್ಯಾಚರಣೆ ಆರಂಭಿಸಿ, ವಿಕಾಸ್ ಕುಮಾರ್ ಎಂಬ ಯೋಧನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿನ್ನೆ ಮಧ್ಯರಾತ್ರಿಯವರೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿತ್ತು. ಅಂತಿಮವಾಗಿ ದುರಂತದಲ್ಲಿ ಹುತಾತ್ಮರಾದ ಮೂವರು ಯೋಧರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುತಾತ್ಮ ಯೋಧರನ್ನು ಹವಲ್ದಾರ್ ರಾಜೇಂದರ್, ಸೈನಿಕರಾದ ಕಮಲ್ ಕುಮಾರ್ ಮತ್ತು ಅಮಿತ್ ಕುಮಾರ್ ಎಂದು ಗುರುತಿಸಲಾಗಿದೆ.

ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್ ನಲ್ಲಿ ಸಂಭವಿಸಿದ ಮತ್ತೊಂದು ಹಿಮಪಾತದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ಯೋಧನನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT