ದೇಶ

ಹೈದರಾಬಾದ್ ಅತ್ಯಾಚಾರಿಗಳ ಬೇಟೆ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ 

Manjula VN

ಹೈದರಾಬಾದ್: ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. 

ಪ್ರಿಯಾಂಕಾ ರೆಡ್ಡಿ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಇಂದು ಬೆಳಿಗ್ಗೆ ಹೈದರಾಬಾದ್ ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. 

ಆರೋಪಿಗಳನ್ನು ಪೊಲೀಸರು ಎನ್'ಕೌಂಟರ್ ಮಾಡಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಹುಬ್ಬಳ್ಳಿ ಮೂಲಕ ವಿಶ್ವನಾಥ್ ಸಜ್ಜನರ್ ಕುರಿತು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. 

ವಿಶ್ವನಾಥ್ ಸಜ್ಜನರ್ ಅವರು, ಎನ್'ಕೌಂಟರ್ ನಡೆಸಿದ್ದ ಪೊಲೀಸ್ ತಂಡ ನೇತೃತ್ವ ವಹಿಸಿದ್ದರು. ವಿಶ್ವನಾಥ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ. ಪ್ರಸ್ತುತ ವಿಶ್ವನಾಥ್ ಅವರು ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ.

SCROLL FOR NEXT