ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!
ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ.
ಹೈದರಾಬಾದ್: ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ.
ಶುಕ್ರವಾರ ಬೆಳಗಿನ ಜಾವ ಸ್ಥಳ ಪರಿಶೀಲನೆಗೆಂದು ಆರೋಪಿಗಳನ್ನು ಕರೆದೊಯ್ಯಲಾಗಿತ್ತು, ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದ್ದರು, ಹೀಗಾಗಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳಿಗೆ ಗುಂಡು ಹಾರಿಸಿದ್ದಾರೆ.
ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ಈ ತಂಡದ ನೇತೃತ್ವ ವಹಿಸಿದ್ದರು. ವಿಶ್ವನಾಥ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.