ನಿತೀಶ್ ಕುಮಾರ್ 
ದೇಶ

ಅತ್ಯಾಚಾರಕ್ಕೆ ಅಶ್ಲೀಲ ವೆಬ್ ಸೈಟ್ ಕಾರಣ, ಪೋರ್ನ್ ನಿಷೇಧಿಸುವಂತೆ ಕೇಂದ್ರಕ್ಕೆ ಪತ್ರ: ಬಿಹಾರ ಸಿಎಂ

ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಾಗಲು ಅಶ್ಲೀಲ ವೆಬ್ ಸೈಟ್ ಗಳು ಕಾರಣ ಎಂದು ಆರೋಪಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಎಲ್ಲಾ ಪೋರ್ನ್ ವೆಬ್ ಸೈಟ್ ಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಗೋಪಾಲ್ ಗಂಜ್: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಾಗಲು ಅಶ್ಲೀಲ ವೆಬ್ ಸೈಟ್ ಗಳು ಕಾರಣ ಎಂದು ಆರೋಪಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಎಲ್ಲಾ ಪೋರ್ನ್ ವೆಬ್ ಸೈಟ್ ಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಹೈದರಾಬಾದ್ ಅತ್ಯಾಚಾರ ಹಾಗೂ ತಮ್ಮ ರಾಜ್ಯದಲ್ಲಿನ ಬಕ್ಸರ್ ಮತ್ತು ಸಮಸ್ತಿಪುರ್ ಜಿಲ್ಲೆಯಲ್ಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಸಿಎಂ, ಅಶ್ಲೀಲ ವೆಬ್ ಸೈಟ್ ಗಳನ್ನು ಸಂಪೂರ್ಣ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಹೈದರಾಬಾದ್, ಬಿಹಾರ ಹಾಗೂ ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಇತ್ತೀಚಿಗೆ ಹೀನ ಕೃತ್ಯಗಳು ಹೆಚ್ಚುತ್ತಿದೆ. ಇದಕ್ಕೆ ಸಾಮಾಜಿಕ ಮಾಧ್ಯಮ ಮತ್ತು ಅಶ್ಲೀಲ ವೆಬ್ ಸೈಟ್ ಗಳು ಕಾರಣ. ತಂತ್ರಜ್ಞಾನದಿಂದ ಸಾಕಷ್ಟು ಪ್ರಯೋಜನ ಇದೆ. ಆದರೆ ಅಷ್ಟೇ ದುಷ್ಪರಿಣಾಮಗಳು ಇದ್ದು, ಅದರ ಬಗ್ಗೆ ನಾನು ಸದಾ ಕಳವಳ ವ್ಯಕ್ತಪಡಿಸುತ್ತೇನೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ