ದೇಶ

ದೆಹಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಘಟನೆಯೊಂದು 'ಘೋರ ದುರಂತ'- ಸಿಎಂ ಕೇಜ್ರಿವಾಲ್

Manjula VN

ನವದೆಹಲಿ: ದೆಹಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಟ ಸಂಭವಿಸಿದ್ದು, ಘಟನೆಯೊಂದು ಘೋರ ದುರಂತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮ ಪಡುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ. 

ದುರ್ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಇದೊಂದು ಅತ್ಯಂತ ಘೋರ ದುರಂತದ ಸುದ್ದಿ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಮ್ಮಿಂದ ಸಾಧ್ಯವಾದಷ್ಟು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಿದ್ದಾರೆ. 

ಇಂದು ಬೆಳಿಗ್ಗೆ 5.22ರ ಸುಮಾರಿಗೆ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 42ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. 

SCROLL FOR NEXT