ಸಂಗ್ರಹ ಚಿತ್ರ 
ದೇಶ

ಬಿಹಾರದಲ್ಲೊಂದು ಭೀಭತ್ಸ ಕೃತ್ಯ: !ಅತ್ಯಾಚಾರಕ್ಕೆ ಅವಕಾಶ ನೀಡದ ಯುವತಿಗೆ ಬೆಂಕಿ

ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆಸುವದನ್ನು ತಡೆದ ಬಳಿಕ ಆಕೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. 

ಮುಜಾಫರ್ ಪುರ: ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆಸುವದನ್ನು ತಡೆದ ಬಳಿಕ ಆಕೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.

ಘಟನೆಯಲ್ಲಿ ಶೇಕಡಾ 50 ರಷ್ಟು ಸುಟ್ಟಗಾಯಗಳಿಗೆ ಒಳಗಾದ 23 ವರ್ಷದ ಸಂತ್ರಸ್ತೆಗೆ ಇದೀಗ ಮುಜಾಫರ್ ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಪೋಲೀಸರು ವಿವರಿಸಿದ್ದಾರೆ.ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿಕಾಸ್ ರೈ ತಿಳಿಸಿದ್ದಾರೆ.

ದೂರಿನಲ್ಲಿ, ವಿವರಿಸಿದಂತೆ ಯುವತಿ ಶನಿವಾರ  ಮನೆಯಲ್ಲಿ ಒಬ್ಬಂಟಿಯಾಗಿದ್ದು ನೆರೆಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ಮನೆಗೆ ನುಗ್ಗಿ ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆಗ ಅದನ್ನು ವಿರೋಧಿಸಿದ್ದ ಯುವತಿಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ್ದಾನೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಆಕೆಯ ತಾಯಿ ಮನೆಗೆ ಬಂದಾಗ ಯುವತಿ ಸುಟ್ಟ ಗಾಯಗಳೊಡನೆ ನರಳುತ್ತಿದ್ದದ್ದು ಕಂಡು ಆಸ್ಪತ್ರೆಗೆ ಕರೆದೊಯ್ದರು.ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ