ದೇಶ

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ಭಾರತದಲ್ಲಿ ಪ್ರತಿಭಟನೆ ತೀವ್ರ, ಸೇನೆ ನಿಯೋಜನೆ

Srinivasamurthy VN

ಗುವಾಹತಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಗೃಹ ಸಚಿವಾಲಯ ಸೇನೆ ನಿಯೋಜಿಸಿದೆ.

ಅತ್ತ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿ ಅನುಮೋದನೆ ಪಡೆಯುತ್ತಿದ್ದಂತೆಯೇ ಇತ್ತ ಇದನ್ನು ವಿರೋಧಿಸಿದ್ದ ಅಖಿಲ ಅಸ್ಸಾಂ ವಿದ್ಯಾರ್ಥಿ ಸಂಘ(ಎಎಎಸ್‍ಯು) ಸೇರಿದಂತೆ ಈಶಾನ್ಯ ಭಾಗದ ವಿದ್ಯಾರ್ಥಿ ಒಕ್ಕೂಟಗಳ ವೇದಿಕೆಯಾದ ಈಶಾನ್ಯ ವಿದ್ಯಾರ್ಥಿ ಒಕ್ಕೂಟ (ಎನ್‍ಇಎಸ್‍ಒ) ಬಂದ್ ಗೆ ಕರೆ ನೀಡಿದ್ದವು. ಹೀಗಾಗಿ ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿದ್ಯಾರ್ಥಿ ಸಂಘಟನೆಗಳ ಬಂದ್ ಹಿನ್ನಲೆಯಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಮುಖವಾಗಿ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದೀಗ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನಾಕಾರರು ರಸ್ತೆಗಳಿದು ಟೈರ್ ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ತ್ರಿಪುರಾ ಮತ್ತು ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಈ ರಾಜ್ಯಗಳಲ್ಲಿ ಸೇನೆ ನಿಯೋಜಿಸಲಾಗಿದೆ.

ಅಸ್ಸಾಂಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಸೈನಿಕರನ್ನು ರವಾನೆ ಮಾಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್ ಅವರು, ತ್ರಿಪುರಾದ ಕಾಂಚನ್ ಪುರ್ ಮತ್ತು ಮನು ಪ್ರದೇಶಗಳಿಗೆ ಸೇನೆಯ 2 ಕಾಲಂ ಸೈನಿಕರನ್ನು ರವಾನೆ ಮಾಡಲಾಗಿದ್ದು, ಪ್ರತೀ ಕಾಲಂನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳ ಸಹಿತ 70 ಸೈನಿಕರು ಇರಲಿದ್ದಾರೆ.

SCROLL FOR NEXT