ಸುಪ್ರೀಂ ಕೋರ್ಟ್ 
ದೇಶ

ರಾಮಲಲ್ಲಾಗೆ ರಾಮಜನ್ಮ ಭೂಮಿ, ಮಸೀದಿಗೆ 5 ಎಕರೆ ಫಿಕ್ಸ್: ಅಯೋಧ್ಯೆ ತೀರ್ಪು ಪ್ರಶ್ನಿಸಿದ್ದ 18 ಮರುಪರಿಶೀಲನಾ ಅರ್ಜಿಗಳು ವಜಾ!

ವಿವಾದಿತ ರಾಮಜನ್ಮ ಭೂಮಿ ರಾಮಲಲ್ಲಾಗೆ ನೀಡಿ, ಸುನ್ನಿ ವಕ್ಫ್ ಬೋರ್ಡ್ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ 18 ಮರುಪರಿಶೀಲನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ವಿವಾದಿತ ರಾಮಜನ್ಮ ಭೂಮಿ ರಾಮಲಲ್ಲಾಗೆ ನೀಡಿ, ಸುನ್ನಿ ವಕ್ಫ್ ಬೋರ್ಡ್ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ 18 ಮರುಪರಿಶೀಲನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 

ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ನೀಡಿದ್ದ ಅಯೋಧ್ಯೆ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್ ಭೂಷಣ್, ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪಂಚ ಪೀಠ ಅರ್ಜಿಗಳನ್ನು ವಜಾಗೊಳಿಸಿದೆ. 

ಅಯೋಧ್ಯೆ ತೀರ್ಪು ಪ್ರಶ್ನಿಸಿ ಅಖಿಲ ಭಾರತೀಯ ಹಿಂದೂ ಮಹಾಸಭಾ, ಮುಸ್ಲಿಂ ದಾವೆದಾರರು ಸೇರಿದಂತೆ ಒಟ್ಟು 18 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದೀಗ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದು ಅಯೋಧ್ಯೆ ವಿವಾದ ಇಲ್ಲಿಗೆ ಸಮಾಪ್ತಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್