ದೇಶ

ದೆಹಲಿ ವಿಧಾನಸಭೆ ಚುನಾವಣೆ: ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಮೊರೆ ಹೋದ ಆಮ್ ಆದ್ಮಿ ಪಾರ್ಟಿ 

Sumana Upadhyaya

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ದತೆ ಮಾಡಿಕೊಂಡಿರುವ ಆಮ್ ಆದ್ಮಿ ಪಾರ್ಟಿ ಅದಕ್ಕಾಗಿ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಿದೆ.


ರಾಜಕೀಯ ಚತುರ ಮತ್ತು ಸಂಯುಕ್ತ ಜನತಾ ದಳ ಪಕ್ಷದ ಪ್ರಭಾವಶಾಲಿ ನಾಯಕನಾಗಿರುವ ಪ್ರಶಾಂತ್ ಕಿಶೋರ್ ಅವರು ಭಾರತೀಯ ರಾಜಕೀಯ ಕ್ರಿ ಯಾ ಸಮಿತಿ(ಐಪಿಎಸಿ)ಯ ವಕಾಲತ್ತು ಗುಂಪಿನ ಮುಖ್ಯಸ್ಥರಾಗಿದ್ದು ಅವರ ಜೊತೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ ಒಪ್ಪಂದವನ್ನು ಮಾಡಿಕೊಂಡಿದೆ.


ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅರವಿಂದ್ ಕೇಜ್ರಿವಾಲ್ ಅವರೇ ಘೋಷಣೆ ಮಾಡಿಕೊಂಡಿದ್ದಾರೆ. 


2017ರಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದ ಪ್ರಶಾಂತ್ ಕಿಶೋರ್ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಕಾರಣರಾಗಿದ್ದರು. ಪ್ರಸ್ತುತ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ. ಜೆಡಿಯು ಕೇಂದ್ರದಲ್ಲಿ ಮತ್ತು ಬಿಹಾರದಲ್ಲಿ ಬಿಜೆಪಿಯ ಮೈತ್ರಿಪಕ್ಷವಾಗಿದೆ.


ಮುಂದಿನ ವರ್ಷಾರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಕಳೆದ ಬಾರಿ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ 67 ಕ್ಷೇತ್ರಗಳಲ್ಲಿ ಗೆದ್ದಿದ್ದ ಆಪ್ ಈ ಬಾರಿ ಕೂಡ ಅಧಿಕಾರಕ್ಕೆ ಬರಲು ಉತ್ಸುಕವಾಗಿದೆ.

SCROLL FOR NEXT