ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ, ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 16 ವರ್ಷದ ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ 

ಮುಜಾಫರ್ ನಗರ:  ಹೈದ್ರಾಬಾದಿನಲ್ಲಿ ಪಶು ವೈದ್ಯೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ನಾಲ್ವರು ಕಾಮುಕರನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರೂ ದೇಶದಲ್ಲಿ ಮಹಿಳೆಯರ ಅಪಹರಣ, ಸಾಮೂಹಿಕ ಅತ್ಯಾಚಾರದಂತಹ ಘಟನೆಗಳು ಮರು ಕಳಿಸುತ್ತಲೇ ಇವೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 16 ವರ್ಷದ ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ 

ಯುವತಿಯನ್ನು ರಕ್ಷಿಸಲಾಗಿದೆ.  ಸಲ್ಮಾನ್ ಹಾಗೂ ಪರ್ವೇಜ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಠಾಣಾಧಿಕಾರಿ ಅನಿಲ್ ಕಾಪೆರ್ವನ್ ಹೇಳಿದ್ದಾರೆ. ಅಂಗಡಿಗೆ ಹೋಗಿ ಬರುತ್ತೇನೆಂದು ಹೇಳಿ ಗುರುವಾರ  ಮನೆ ಬಿಟ್ಟು ಹೋಗಿದ್ದ ಯುವತಿ ಅಲ್ಲಿಂದ ಪತ್ತೆಯಾಗಿರಲಿಲ್ಲ. 

ಯುವತಿಯ ತಂದೆ ನೀಡಿದ ದೂರಿನ ಅನ್ವಯ ತನಿಖೆ ನಡೆಸಿ, ಯುವತಿಯನ್ನು ರಕ್ಷಿಸಲಾಗಿದೆ.  ಹತ್ತಿರದ ಸ್ಥಳವೊಂದಕ್ಕೆ ಯುವತಿಯನ್ನು ಕರೆದೊಯ್ದು ಆರೋಪಿಗಳು ಅತ್ಯಾಚಾರ ನಡೆಸಿ, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪೊಕ್ಸೊ  ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಯುವತಿಯನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕಾರ್ಪೆವನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT