ದೇಶ

ಪೌರತ್ವ ಕಾಯ್ದೆಗೆ ವಿರೋಧ: ಇಸ್ಲಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ, ಹೊತ್ತಿ ಹುರಿದ ದೆಹಲಿ, ಬಸ್‌ಗಳಿಗೆ ಬೆಂಕಿ, 60 ಗಾಯ

Vishwanath S

ನವದೆಹಲಿ: ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹಲವು ಬಸ್‌ಗಳು ಮತ್ತು ಬೈಕ್ ಗಳು ಬೆಂಕಿಗೆ ಅಹುತಿಯಾಗಿದ್ದು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನು ಹಿಂಸಾಚಾರ ನಡೆಸಿದ್ದರಿಂದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಸಿಡಿಸಿದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ದೆಹಲಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. 

ವಿಶ್ವ ವಿದ್ಯಾಲಯದ ಆವರಣ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆಯಿತು. ಕೂಡಲೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಹತೋಟಿಗೆ ತರಲು ಯತ್ನಿಸಿದರು. 

ಪ್ರತಿಭಟನೆ ವೇಳೆ ಅಪರಿಚಿತರು ಬಸ್ ಗಳಿಗೆ ಬೆಂಕಿ ಹಚ್ಚಿದರು. ಅಲ್ಲದೆ ನೂರಾರು ಬೈಕ್ ಗಳಿಗೆ ಬೆಂಕಿ ಹಚ್ಚಿ ಸೂಟು ಹಾಕಿದರು. 

SCROLL FOR NEXT