ದೇಶ

ಸರ್ದಾರ್ ವಲ್ಲಭಬಾಯ್ ಪಟೇಲ್ ಪುಣ್ಯ ತಿಥಿ, ಪ್ರಧಾನಿ ಮೋದಿ, ಅಮಿತ್ ಶಾ ಸ್ಮರಣೆ 

Nagaraja AB

ನವದೆಹಲಿ: ದೇಶದ ಪ್ರಥಮ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪುಣ್ಯ ತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ.

ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪುಣ್ಯ ತಿಥಿ ಸಂದರ್ಭದಲ್ಲಿ ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಅಸಾಧಾರಣ ಸೇವೆಯಿಂದ ನಾವು ಶಾಶ್ವತವಾಗಿ ಪ್ರೇರಿತರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಸರ್ದಾರ್ ವಲ್ಲಭಬಾಯ್ ಪಟೇಲ್ ನಿಜಕ್ಕೂ ಭಾರತ ರತ್ನ, ಸ್ವಾತಂತ್ರಕ್ಕಾಗಿ ಪ್ರಮುಖ ಪಾತ್ರ ವಹಿಸಿದಲ್ಲದೇ, ದೇಶದ ಏಕತೆಯಲ್ಲಿಯೂ ಮುಂಚೂಣಿಯಲ್ಲಿದ್ದರು  ಎಂಬುದಾಗಿ ಅಮಿತ್ ಶಾ ಹೇಳಿದ್ದಾರೆ.

ಪಟೇಲ್ ಅವರ ಉಕ್ಕಿನ ನಾಯಕತ್ವದಿಂದ ಸ್ಪೂರ್ತಿಗೊಂಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಚಾರ, ಜಾತಿಪದ್ಧತಿಯನ್ನು ತೊಡೆದು ಹಾಕಿ ಭದ್ರತೆಯನ್ನು ಸೃಷ್ಟಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ದೇಶ ಸ್ವಾತಂತ್ರ್ಯ ಪಡೆದ ನಂತರ ಎಲ್ಲಾ 562 ರಾಜಮನೆತಗಳನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಸೇರ್ಪಡೆಗೊಳಿಸಿದ ಕೀರ್ತಿಗೆ ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರರಾಗಿದ್ದಾರೆ.

SCROLL FOR NEXT