ಅಮಿತ್ ಶಾ 
ದೇಶ

ಜಾಮಿಯಾ ಪ್ರತಿಭಟನೆ ವೇಳೆ ಪೊಲೀಸರಿಂದ ಒಂದು ಗುಂಡೂ ಹಾರಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಒಂದೇ ಒಂದು ಗುಂಡನ್ನೂ ಹಾರಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಒಂದೇ ಒಂದು ಗುಂಡನ್ನೂ ಹಾರಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಪ್ರತಿಭಟನಾನಿರತರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆಂಬ ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. 

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಗೃಹ ಸಚಿವಾಲಯ, ಅಪರಾಧ ಹಿನ್ನೆಲೆಯುಳ್ಳ 10 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಹಲವು ಸಮಾಜಘಾತುಕರನ್ನು ಬಂಧನಕ್ಕೊಳಪಡಿಸಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರು ಯಾರೊಬ್ಬರ ಮೇಲೂ ಗುಂಡು ಹಾರಿಸಿಲ್ಲ ಎಂದು ಹೇಳಿದೆ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT