ದೇಶ

ದೆಹಲಿ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಬಂಧನ

Nagaraja AB

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡಿ ಹೌಸ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆಗಾಗಿ ಕೆಂಪು ಕೋಟೆ ಬಳಿ ತೆರಳು ಅವಕಾಶ ನೀಡಲಿಲ್ಲ. ಹಾಗಾಗೀ ಮಂಡಿ ಹೌಸ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗಿ ದೀಕ್ಷಿತ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. 

ಇದಕ್ಕೂ ಮುನ್ನ ಮಾಜಿ ಜೆಎನ್ ಯು ವಿದ್ಯಾರ್ಥಿ ಹಾಗೂ ಹೋರಾಟಗಾರ ಉಮರ್ ಖಲೀದ್ ಮತ್ತಿತರರನ್ನು ಪೊಲೀಸರು ಬಂಧಿಸಿದ್ದರು. 

ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ ಬಗ್ಗೆ ವದಂತಿಗಳನ್ನು ಹರಡಬಾರದು, ಪೊಲೀಸರೊಂದಿಗೆ ಸಹಕರಿಸುವಂತೆ ದೆಹಲಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ವಿವಿಧ ಪ್ರತಿಪಕ್ಷಗಳು ಕೆಂಪು ಕೋಟೆ ಬಳಿ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. 

ಕಳೆದ ವಾರ ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆ ರಾಷ್ಟ್ರಗಳ ಅಂಕಿತದೊಂದಿಗೆ ಕಾಯ್ದೆಯಾಗಿದ ನಂತರ  ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.

SCROLL FOR NEXT