ದೇಶ

ಜೈಪುರ ಸರಣಿ ಬಾಂಬ್ ಸ್ಫೋಟ: ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

Lingaraj Badiger

ಜೈಪುರ: 2008ರ ಜೈಪುರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನಾಲ್ವರು ಅಪರಾಧಿಗಳಿಗೆ ಶುಕ್ರವಾರ ಗಲ್ಲು ಶಿಕ್ಷೆ ವಿಧಿಸಿದೆ.

70 ಮಂದಿಯನ್ನು ಬಲಿ ಪಡೆದ 2008ರಲ್ಲಿ ಸರಣಿ ಸ್ಫೋಟದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್, ಕಳೆದ ಬುಧವಾರ ಬಂಧಿತರ ಪೈಕಿ ನಾಲ್ವರು ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು.

ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ ಕೋರ್ಟ್, ಮೊಹಮ್ಮದ್ ಸೈಫ್, ಮೊಹಮ್ಮದ್ ಸರ್ವಾರ್ ಅಜ್ಮಿ, ಮೊಹಮ್ಮದ್ ಸಲ್ಮಾನ್ ಮತ್ತು ಸೈಫುರೆಹ್ಮಾನ್ ಗೆ ಗಲ್ಲು ಶಿಕ್ಷೆ ವಿಧಿಸಿದೆ.

2008, ಮೇ 13ರಂದು ರಾಜಸ್ಥಾನದ ಜೈಪುರದಲ್ಲಿ 8 ಪ್ರದೇಶಗಳಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 70 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರೆ, 185 ಮಂದಿ ಗಾಯಗೊಂಡಿದ್ದರು.

ಅಂತೆಯೇ ಪ್ರಕರಣದ ಉಳಿದ ಆರೋಪಿಗಳಾದ ಶಹಬಾಜ್ ಹುಸೇನ್ ನನ್ನು ಕೋರ್ಟ್ ನಿರ್ದೋಷಿ ಎಂದು ಹೇಳಿದ್ದು, ಆತನ ವಿರುದ್ಧ ಮಾಡಲಾಗಿದ್ದ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ.

SCROLL FOR NEXT