ದೇಶ

ಪ್ರತಿಭಟನೆ ವೇಳೆ ನಷ್ಟವುಂಟು ಮಾಡುವವರ ಆಸ್ತಿ ಜಪ್ತಿ: ಯೋಗಿ ಆದಿತ್ಯಾನಾಥ್ ಎಚ್ಚರಿಕೆ

Manjula VN

ಲಖನೌ: ಪ್ರತಿಭಟನೆ ಹಾಗೂ ಹಿಂಸಾಚಾರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟು ಉಂಟು ಮಾಡುವವರ ಆಸ್ತಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ. 

ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡುತ್ತಿದ್ದಾರೆ. 

ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ಯೋಗಿ ಆದಿತ್ಯಾನಾಥ್ ಅವರು ಕಠಿಣ ಎಚ್ಚರಿಕೆ ನೀಡಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡುವವರ ಆಸ್ತಿಗಳನ್ನೇ ಜಪ್ತಿ ಮಾಡಿ ಹರಾಜು ಹಾಕಲಾಗುತ್ತದೆ ಎಂದು ಹೇಳಿದ್ದಾರೆ. 

 , ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಪೌರತ್ವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಹೆಸರಿನಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಎಡ ಪಕ್ಷಗಳು ಇಡೀ ದೇಶಕ್ಕೇ ಬೆಂಕಿ ಹಚ್ಚುತ್ತಿದೆ. ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡುವವರ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಲಿದ್ದು, ಸಿಸಿಟಿಪಿ ಪರಿಶೀಲನೆ ಬಳಿಕ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಷ್ಟ ಉಂಟು ಮಾಡುವವರ ಆಸ್ತಿಯನ್ನು ಜಪ್ತಿ ಮಾಡಿ ಹರಾಜು ಹಾಕಿ, ನಷ್ಟವನ್ನು ಪರಿಹಾರ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

SCROLL FOR NEXT