ದೇಶ

ಪೌರತ್ವ ಪ್ರತಿಭಟನೆ: ನಾಳೆ ಲಖನೌಗೆ ಟಿಎಂಸಿ ನಿಯೋಗ ಭೇಟಿ, ಮೃತರ ಕುಟುಂಬಕ್ಕೆ ಸಾಂತ್ವನ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಉತ್ತರ ಪ್ರದೇಶದಲ್ಲಿ ಪೊಲೀಸರ ಗುಂಡಿಗೆ  8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಯೋಗ ನಾಳೆ ಲಖನೌಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದೆ.

ಟಿಎಂಸಿ ನಾಯಕ ದಿನೇಶ್ ತ್ರಿವೇದಿ ನೇತೃತ್ವದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಬೆಳಗ್ಗೆ ಲಖನೌಗೆ ತೆರಳಲಿದ್ದು, ಪೊಲೀಸ್ ಗುಂಡಿಗೆ ಬಲಿಯಾದವರ ಕುಟಂಬವನ್ನು ಭೇಟಿ ಮಾಡಲಿದೆ.

"ಮಾನವೀಯ ಉದ್ದೇಶದಿಂದ ನಮ್ಮ ನಿಯೋಗವು ಉತ್ತರ ಪ್ರದೇಶಕ್ಕೆ(ಲಖನೌ) ಭೇಟಿ ನೀಡುತ್ತಿದ್ದು, ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗ ಹಾಗೂ ಗಾಯಗೊಂಡವರನ್ನು ಭೇಟಿ ಮಾಡಲಿದೆ" ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

SCROLL FOR NEXT