ದೇಶ

ಪ್ರಧಾನಿ ದೆಹಲಿ ರ್ಯಾಲಿಯ ಭದ್ರತೆಗೆ ಫೇಸ್ ರೆಕಗ್ನಿಶನ್ ತಂತ್ರಜ್ಞಾನ ಬಳಕೆ! 

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 

ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ಈ ರ್ಯಾಲಿಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಇದೇ ಮೊದಲ ಬಾರಿಗೆ ಫೇಸ್ ರೆಕಗ್ನಿಶನ್ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರತಿಯೊಬ್ಬರೂ ಈ ಫೇಸ್ ರೆಕಗ್ನಿಶನ್ ತಂತ್ರಜ್ಞಾನಕ್ಕೆ ಒಳಪಡಲಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ರಾಷ್ಟ್ರರಾಜಧಾನಿಯಲ್ಲಿ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು ಈ ನಡುವೆಯೇ ಪ್ರಧಾನಿ ರ್ಯಾಲಿ ನಡೆಯುತ್ತಿರುವುದರಿಂದ ಮಹತ್ವ ಪಡೆದುಕೊಂಡಿದೆ.
 

SCROLL FOR NEXT