ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ
ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
ಇತ್ತೀಚಿನ ವರದಿಗಳಂತೆ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇತ್ತೀಚಿನ ವರದಿಗಳ ಅನ್ವಯ ಜಾರ್ಖಂಡ್ ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅಖಿಲ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್ಯು) ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Related Article
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ
ಜಾರ್ಖಂಡ್: ಅಂತಿಮ ಹಂತದ ಮತದಾನ ಮುಕ್ತಾಯ, ಶೇ 62.77ರಷ್ಟು ಮತದಾನ, ಡಿ. 23ಕ್ಕೆ ಫಲಿತಾಂಶ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.