ದೆಹಲಿಯಲ್ಲಿ ಮತ್ತೊಂದು ಬೆಂಕಿ ದುರಂತ: ಹೊತ್ತಿ ಉರಿದ ಶೂ ಫ್ಯಾಕ್ಟರಿ
ರಾಜಧಾನಿ ದೆಹಲಿಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಭಿಸಿತು.
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಭಿಸಿತು. ಕೂಡಲೇ ಸ್ಥಳಕ್ಕೆ 22 ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾದರು.
ಎರಡು ಕಾರ್ಖಾನೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವರಿಗೆ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಒಂದು ಕೈಗಾರಿಕೆಯಿಂದ ಬೆಂಕಿಯ ಜ್ವಾಲೆಯನ್ನು ಆರಿಸಿದ್ದಾರೆ. ಮತ್ತೊಂದು ಕಾರ್ಖಾನೆಯಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.ಇದು ಶೂ ಫ್ಯಾಕ್ಟರಿಯಾಗಿದೆ.
ಈ ಸಂದರ್ಭದಲ್ಲಿ ಫ್ಯಾಕ್ಟರಿಯೊಳಗೆ ಯಾರೂ ಸಿಕ್ಕಿಹಾಕಿಕೊಂಡಿರುವ ಬಗ್ಗೆ ವರದಿಯಾಗಿಲ್ಲ. ಸಿಲಿಂಡರ್ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.