ದೇಶ

ಪೌರತ್ವ ಪ್ರತಿಭಟನೆ: ದೆಹಲಿಯ ಉತ್ತರ ಪ್ರದೇಶ ಭವನದ ಬಳಿ ಪ್ರತಿಭಟನಾಕಾರರ ಬಂಧನ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ದೆಹಲಿಯ ಉತ್ತರ ಪ್ರದೇಶ ಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಘಟಕದ ಕಾರ್ಯಕರ್ತನ್ನು ಒಳಗೊಂಡ ಜಾಮಿಯಾ ಸಮನ್ವಯ ಸಮಿತಿ ಉತ್ತರ ಪ್ರದೇಶ ಭವನ ಮುತ್ತಿಗೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭವನದ ಬಳಿ ಭಾರಿ ಭದ್ರತ್ರೆ ಏರ್ಪಡಿಸಲಾಗಿತ್ತು.

ಪ್ರತಿಭಟನಾಕಾರರು ಉತ್ತರ ಪ್ರದೇಶ ಭವನದ ಬಳಿ ಆಗಮಿಸುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು, ಮಂದಿರ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ದರು.

ಇಂದು ಬೆಳಗ್ಗೆ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಮತ್ತು ದೆಹಲಿ ಮಾಜಿ ಶಾಸಕ ಸೋಯಿಬ್ ಇಖ್ಬಾಲ್ ಸೇರಿದಂತೆ ಹಲವು ನಾಯಕರು ದೆಹಲಿಯ ಜಾಮಾ ಮಸೀದಿ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಅಲ್ಕಾ ಲಾಂಬಾ ಅವರು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ನಿರುದ್ಯೋಗ ನಿಜವಾದ ಸಮಸ್ಯೆಯಾಗಿದ್ದು, ಪ್ರಧಾನಿ ಮೋದಿ ಈ ಬಗ್ಗೆ ಗಮನಹರಿಸುವ ಬದಲು ಎನ್ ಆರ್ ಸಿಗಾಗಿ ಜನರನ್ನು ಕ್ಯೂನಲ್ಲಿ ನಿಲ್ಲುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

SCROLL FOR NEXT