ದೇಶ

ಪೌರತ್ವ ಕಾಯ್ದೆ ವಿರುದ್ಧ ಹೋರಾಟ ಮುಂದುವರೆಸಿ: ವಿದ್ಯಾರ್ಥಿಗಳಿಗೆ ಬಂಗಾಳ ಸಿಎಂ ದೀದಿ ಕರೆ

Manjula VN

ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮತ್ತೆ ಕಿಡಿಕಾರಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಬೆಂಕಿ ಜೊತ ಸರಸ ಬೇಡ ಎಂದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಗುರುವಾರ ನಗರದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಕಾಯ್ದೆ ವಾಪಸ್ ಪಡೆಯುವವರೆಗೂ ಯಾವುದೇ ಹೆದರಿಕೆಯಿಲ್ಲದೆ ನೀವು ಹೋರಾಟ ಮುಂದುವರೆಸಿ. ನಿಮ್ಮ ಜೊತೆ ನಾವಿದ್ದೇವೆಂದು ಅಭಯ ನೀಡಿದ್ದಾರೆ. ಅಲ್ಲದೆ, ಎಲ್ಲಾ ಪಕ್ಷಗಳಿಗೆ ಮಸಿ ಬಳಿಯಲು ಯತ್ನಿಸುತ್ತಿರುವ ಬಿಜೆಪಿ, ತಾನು ಮಾತ್ರ ಶ್ವೇತ ವರ್ಣ ಎಂಬಂತೆ ಬೀಗುತ್ತಿದೆ ಎಂದು ಹೇಳಿದ್ದಾರೆ. 

ಈ ನಡುೆ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಇರುವ ಗೊಂದಲಗಳಿಂದಾಗಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಗೊಂದಲ ನಿವಾರಣೆಗೆ ಪಶ್ಚಿಮ ಬಂಗಾಳಕ್ಕೆ 30000 ಸ್ವಯಂ ಸೇವಕರನ್ನು ನಿಯೋಜಿಸಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಪೌರತ್ವ ಕುರಿತ ಗೊಂದಲಗಳು, 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಗಬಹುದು ಎಂಬ ಭೀತಿಯಲ್ಲಿ ಪಕ್ಷ ಇಂತಹದ್ದೊಂದು ಯೋಜನೆ ರೂಪಿಸಿದೆ. ಈ 30,000 ಸ್ವಯಂ ಸೇವಕರು, ಪೌರತ್ವ ಗೊಂದಲ ಹೆಚ್ಚಿರುವ ಪ್ರದೇಶಗಳ ಪ್ರತಿ ಮನೆಗೂ ತೆರಳಿ, ಕಾಯ್ದೆಯಲ್ಲಿನ ಅಂಶಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ. ಇವರೆಲ್ಲಾ ಜನವರಿ ಮಾಸಾಂತ್ಯದ ವೇಳೆಗೆ ತಮ್ಮ ಕೆಲಸ ಆರಂಭಿಸಲಿದ್ದಾರೆಂದು ವರದಿಗಳು ತಿಳಿಸಿವೆ. 

SCROLL FOR NEXT