ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಾಂಪ್ರದಾಯಿಕ ನೃತ್ಯಕ್ಕೆ ರಾಹುಲ್ ಗಾಂಧಿ ಹೆಜ್ಜೆ, ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವಕ್ಕೆ ಚಾಲನೆ!

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಾಂಪ್ರದಾಯಿಕ ನೃತ್ಯೋತ್ಸವದಲ್ಲಿ ಪಾಲ್ಗೊಂಡು ಹೆಜ್ಜೆ ಹಾಕುವ ಮೂಲಕ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ನೃತ್ಯೋತ್ಸವದಲ್ಲಿ ರಾಹುಲ್ ಗಾಂಧಿ
Srinivasa Murthy VN
Updated On : 27 Dec 2019, 12:43 pm

ರಾಯ್ ಪುರ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಾಂಪ್ರದಾಯಿಕ ನೃತ್ಯೋತ್ಸವದಲ್ಲಿ ಪಾಲ್ಗೊಂಡು ಹೆಜ್ಜೆ ಹಾಕುವ ಮೂಲಕ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ರಾಯ್ ಪುರದಲ್ಲಿ ಇಂದಿನಿಂದ ಆರಂಭವಾಗಿರುವ ಮೂರು ದಿನಗಳ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ ಅವರು ಅಲ್ಲಿನ ನೃತ್ಯಗಾರರೊಂದಿಗೆ ಹೆಜ್ಜೆ ಹಾಕುವ ಮೂಲಕ ನೃತ್ಯೋತ್ಸವಕ್ಕೆ ಚಾಲನೆ ನೀಡಿದರು. ಈ ದೇಶದ ಅತೀ ದೊಡ್ಡ ಬುಡಕಟ್ಟು ನೃತ್ಯೋತ್ಸವ ಎಂದೇ ಖ್ಯಾತಿ ಪಡೆದಿರುವ ಈ ಕಾರ್ಯಕ್ರಮದಲ್ಲಿ ಭಾರತದ 25 ರಾಜ್ಯಗಳ ಬುಡಕಟ್ಟು ನೃತ್ಯಗಾರರಲ್ಲದೇ ಶ್ರೀಲಂಕಾ, ಉಗಾಂಡಾ, ಬೆಲಾರಸ್, ಮಾಲ್ಡೀವ್ಸ್, ಥೈಲ್ಯಾಂಡ್ ಮತ್ತು ಬಾಂಗ್ಲಾದೇಶಗಳ ಸುಮಾರು 1200ಕ್ಕೂ ಅಧಿಕ ನೃತ್ಯಗಾರರು ಪಾಲ್ಗೊಂಡಿದ್ದಾರೆ.

ಇನ್ನು ಇಂದಿನ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತ್ರವಲ್ಲದೇ ಛತ್ತೀಸ್ ಘಡ ಸಿಎಂ ಭೂಪೇಶ್ ಬಗೇಲಾ ಸೇರಿದಂತೆ ಛತ್ತೀಸ್ ಘಡದ ಸಮಸ್ತ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದಾರೆ.
 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement