ದೇಶ

ಎನ್ ಸಿಪಿ ಆದೇಶ ಪಾಲಿಸುತ್ತೇನೆ: ಮಹಾ ಸಂಪುಟ ಸೇರ್ಪಡೆ ಬಗ್ಗೆ ಅಜಿತ್ ಪವಾರ್

Lingaraj Badiger

ಪುಣೆ: ನಾನು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟ ಸೇರ್ಪಡೆ ಬಗ್ಗೆ ಎನ್ ಸಿಪಿ ನಾಯಕರು ನಿರ್ಧರಿಸುತ್ತಾರೆ ಎಂದು ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

ಬಳೆವಾಡಿ ಸ್ಟೇಡಿಯಂನಲ್ಲಿ ಕ್ರೀಡಾ ಕಾರ್ಯಕ್ರಮವೊಂದನ್ನು ಉದ್ಘಾಟಿಸಿದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್ ಅವರು, ಡಿಸೆಂಬರ್ 30ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾನು ಸಚಿವನಾಗುವ ಬಗ್ಗೆ ನಮ್ಮ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದರು.

ಡಿಸೆಂಬರ್ 30ರಂದು ಅಜಿತ್ ಪವಾರ್ ಅವರು ಮಹಾರಾಷ್ಟ್ರ ವಿಕಾಸ ಆಘಾದಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಪವಾರ್ ಅವರು, ಪಕ್ಷದ ನಾಯಕರ ಆದೇಶವನ್ನು ನಾನು ಪಾಲಿಸುತ್ತೇನೆ. ಈ ಸಂಬಂಧ ನಾನು ಈಗಾಗಲೇ ನನ್ನ ನಿಲುವು ಸ್ಪಷ್ಟಪಡಿಸಿದ್ದೇನೆ ಎಂದರು.

ಅಜಿತ್ ಪವಾರ್ ಅವರು ದೇವೇಂದ್ರ ಫಡ್ನವಿಸ್ ಅವರ ಜೊತೆ ಸೇರಿ ಬಿಜೆಪಿ ಸರ್ಕಾರ ರಚಿಸಿದ ನಂತರ ಎನ್ ಸಿಪಿಯಿಂದ ದೂರವಾಗಿದ್ದರು. ಆದರೆ ಕೆಲವೇ ಗಂಟೆಗಳಲ್ಲಿ ಮತ್ತೆ ಪಕ್ಷಕ್ಕೆ ಮರಳಿದ್ದರು. ಇದೀಗ ಮತ್ತೆ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

SCROLL FOR NEXT