ಸದ್ದು ಮಾಡಿದ ಅಪರಾಧ ಸುದ್ದಿಗಳು 
ದೇಶ

ಹಿನ್ನೋಟ 2019: ದೇಶಾದ್ಯಂತ ಸದ್ದು ಮಾಡಿದ ಕ್ರೈಂ ಸುದ್ದಿಗಳು; ಬೆಚ್ಚಿ ಬೀಳಿಸಿದ ಅಪರಾಧ ಲೋಕ

ಹೊಸ ವರ್ಷದ ಹೊಸ್ತಿಲಲ್ಲಿ ಇರುವಾಗ ಕಹಿ ಘಟನೆಗಳನ್ನೇಕೆ ನೆನಪಿಸಿಕೊಳ್ಳಬೇಕು ಎನ್ನುವ ಪ್ರಶ್ನೆ ಎದುರಾಗುವುದು ಸಹಜವೇ. ಆದರೆ, ಈ ಘಟನೆಗಳ ಆಂತರ್ಯದಲ್ಲಿ ಹಲವು ಪಾಠಗಳು ಅಡಗಿವೆ. 2019 ರಲ್ಲಿ ದೇಶ ಹಾಗೂ ರಾಜ್ಯದಲ್ಲಿ ಸದ್ದು ಮಾಡಿದ ಅಪರಾಧ ಸುದ್ದಿಗಳು ಇಲ್ಲಿವೆ.

ಹೊಸ ವರ್ಷದ ಹೊಸ್ತಿಲಲ್ಲಿ ಇರುವಾಗ ಕಹಿ ಘಟನೆಗಳನ್ನೇಕೆ ನೆನಪಿಸಿಕೊಳ್ಳಬೇಕು ಎನ್ನುವ ಪ್ರಶ್ನೆ ಎದುರಾಗುವುದು ಸಹಜವೇ. ಆದರೆ, ಈ ಘಟನೆಗಳ ಆಂತರ್ಯದಲ್ಲಿ ಹಲವು ಪಾಠಗಳು ಅಡಗಿವೆ. 2019 ರಲ್ಲಿ ದೇಶ ಹಾಗೂ ರಾಜ್ಯದಲ್ಲಿ ಸದ್ದು ಮಾಡಿದ ಅಪರಾಧ ಸುದ್ದಿಗಳು ಇಲ್ಲಿವೆ.

ನ.27ರಂದು ಹೈದ್ರಾಬಾದ್‌ನಲ್ಲಿ ನಾಲ್ವರು ರಕ್ಕಸರು 26 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ, ಕೊಂದು, ಸುಟ್ಟುಹಾಕಿದ ಪೈಶಾಚಿಕ ಕೃತ್ಯ ಬೆಳಕಿಗೆ ಬಂದದ್ದೇ, ಇಡೀ ದೇಶವೇ ಆಕ್ರೋಶದಿಂದ ರಸ್ತೆಗಿಳಿಯಿತು. ಈ ಘಟನೆಯೆಡೆಗೆ ಆಕ್ರೋಶ ಯಾವ ಪ್ರಮಾಣದಲ್ಲಿ ಇತ್ತೆಂದರೆ, ಡಿ.6ರಂದು ನಾಲ್ಕೂ ಪಾತಕಿಗಳು ಎನ್‌ಕೌಂಟರ್‌ನಲ್ಲಿ ಸತ್ತಾಗ ಇಡೀ ದೇಶವೇ ಸಂಭ್ರಮಿಸಿತು. 

ಆದರೆ, ಆ ಸಂಭ್ರಮ ಹೆಚ್ಚು ಸಮಯ ಇರಲಿಲ್ಲ. ಏಕೆಂದರೆ, ಅದೇ ದಿನವೇ ಉತ್ತರ ಪ್ರದೇಶದ ಉನ್ನಾವೋದಲ್ಲಿ ಅತ್ಯಾಚಾರ ಪೀಡಿತೆ ಕೊನೆಯುಸಿರೆಳೆದಳು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅತ್ಯಾಚಾರಿಗಳು ಕೋರ್ಟ್‌ಗೆ ತೆರಳುತ್ತಿದ್ದ ಸಂತ್ರಸ್ತೆ ಯುವತಿಯ ಮೇಲೆ ದಾಳಿ ಎಸಗಿ, ಬೆಂಕಿ ಹಚ್ಚಿ ಓಡಿ ಹೋಗಿದ್ದರು. ಕೊನೆಗೆ ಚಿಕಿತ್ಸೆ ಫಲಿಸದೇ ಸಂತ್ರಸ್ತ ಯುವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಉನ್ನಾವ್ ನಲ್ಲಿ ನಡೆದ ಅತ್ಯಾಚಾರ ಪ್ರರಕಣದ ಅಪರಾಧಿ ಕುಲ್ದೀಪ್ ಸಿಂಗ್ ಸೆಂಗಾರ್ ಗೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಜೀವಿತಾವಧಿ ಶಿಕ್ಷೆ ವಿಧಿಸಿತು. ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರಪ್ರದೇಶ ಬಿಜೆಪಿಯ ಮಾಜಿ ಶಾಸಕ ಕುಲ್ ದೀಪ್ ಸಿಂಗ್ ಸೆನ್ಗಾರ್ ದೋಷಿ ಎಂದು ದಿಲ್ಲಿಯ ತೀಸ್ ಹಜಾರಿ ಕೋರ್ಟ್ ಪ್ರಕಟಿಸಿತು. ಎರಡು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರಿನ ಏರೋ ಇಂಡಿಯಾದ ಡೊಮೆಸ್ಟಿಕ್‌ ಪಾರ್ಕಿಂಗ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸುಮಾರು 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾದವು. ಇದಕ್ಕೂ ಮುನ್ನ ವೈಮಾನಿಕ ತರಬೇತಿ ವೇಳೆ, 2 ಲಘು ವಿಮಾನಗಳು ಪರಸ್ಪರ ಡಿಕ್ಕಿಯಾಗಿ ಒಬ್ಬ ಪೈಲಟ್‌ ಸಾವನ್ನಪ್ಪಿದ ಘಟನೆ ನಡೆದಿತ್ತು.

ಮಾರ್ಚ್‌ 19ರದು ಧಾರವಾಡದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ 15ಕ್ಕೂ ಹೆಚ್ಚು ಜನ ಮೃತಪಟ್ಟರು. ವಿಪತ್ತು ನಿರ್ವಹಣಾ ಸಿಬ್ಬಂದಿಯ ಅತೀವ ಪರಿಶ್ರಮದ ಫ‌ಲವಾಗಿ 60ಕ್ಕೂ ಹೆಚ್ಚು ಜನರು ಬದುಕುಳಿದರು.

ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ವಂಚನೆ ಪ್ರಕರಣ ಬಯಲು. ಶಿವಾಜಿ ನಗರದಲ್ಲಿರುವ ಐಎಂಎ ಕಚೇರಿ ಎದುರು ಸಾವಿರಾರು ಜನರಿಂದ ಪ್ರತಿಭಟನೆ.

ಜೂನ್ 18ರಂದು ಬೆಂಗಳೂರಿನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕದ (ಎಸ್‌ಟಿಪಿ) ಸೆಂಟ್ರಿಂಗ್ ಕುಸಿದು ಮೂವರು ದುರ್ಮರಣ.

ಆಗಸ್ಟ್ 16 ರಂದು  ಮೈಸೂರಿನ ಉದ್ಯಮಿ ಓಂಪ್ರಕಾಶ್‌ ಭಟ್ಟಾಚಾರ್ಯ ಕುಟುಂಬದ ಒಟ್ಟು ಐವರು ಸದಸ್ಯರು ಗುಂಡ್ಲುಪೇಟೆ ಪಟ್ಟಣದ ಖಾಸಗಿ ಜಮೀನಿನಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೈಸೂರಿನಲ್ಲಿ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಶಾಸಕ ತನ್ವೀರ್‌ಸೇಠ್‌ ಮೇಲೆ ಫರ್ಹಾನ್ ಪಾಷಾ ಎಂಬಾತ ಕತ್ತಿಯಿಂದ ದಾಳಿ, ಕೊಲೆಗೆ ಯತ್ನ, ಐಸಿಯುಗೆ ದಾಖಲಾಗಿದ್ದ ತನ್ವೀರ್ ಸೇಠ್ ಹಲವು ದಿನಗಳ ಬಳಿಕ ಡಿಸ್ಚಾರ್ಜ್ ಆಗಿದ್ದರು.

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಭಾರಿ ಪ್ರತಿಭಟನೆ. ಪೊಲೀಸ್‌ ಗೋಲಿಬಾರ್‌ಗೆ ಇಬ್ಬರು ಸಾವು.

ಏಪ್ರಿಲ್‌ 21ರ ಈಸ್ಟರ್‌ ಭಾನುವಾರದಂದು ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟದ ಉಗ್ರರ ದಾಳಿಯಲ್ಲಿ 45 ವಿದೇಶಿ ಪ್ರವಾಸಿಗಳು ಸೇರಿದಂತೆ 259 ಜನ ಮೃತಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT