ರಣಜಿ: ಕರ್ನಾಟಕಕ್ಕೆ 1, ಹಿಮಾಚಲ ಪ್ರದೇಶಗೆ 3 ಅಂಕ 
ದೇಶ

ರಣಜಿ: ಕರ್ನಾಟಕಕ್ಕೆ 1, ಹಿಮಾಚಲ ಪ್ರದೇಶಗೆ 3 ಅಂಕ

ಇಲ್ಲಿ ನಡೆದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ನಡುವಿನ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಆತಿಥೇಯ ತಂಡ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದರಿಂದ ಒಂದು ಅಂಕ ಕಲೆ ಹಾಕಿದೆ. 

ಮೈಸೂರು: ಇಲ್ಲಿ ನಡೆದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ನಡುವಿನ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಆತಿಥೇಯ ತಂಡ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದರಿಂದ ಒಂದು ಅಂಕ ಕಲೆ ಹಾಕಿದೆ. 
  
ಶನಿವಾರ 3 ವಿಕೆಟ್ ಗೆ 191 ರನ್ ಗಳಿಂದ ಆಟ ಮುಂದುವರಿಸಿದ ಕರ್ನಾಟಕ ತಂಡ, 296 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಕರ್ನಾಟಕ ಮೂರು ಪಂದ್ಯಗಳಿಂದ 10 ಅಂಕ ಕಲೆ ಹಾಕಿದೆ. 
  
ಕರ್ನಾಟಕ ತಂಡದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ನಾಯಕ ಕರುಣ್ ನಾಯರ್ ಹಾಗೂ ಭರವಸೆಯ ಎಡಗೈ ಬ್ಯಾಟ್ಸ್ ಮನ್ ದೇವದತ್ ಪಡಿಕ್ಕಲ್ ನೀಡಿದರು. ಈ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿ ಎದುರಾಳಿ ತಂಡಕ್ಕೆ ಕಾಡಿತು. ಈ ಜೋಡಿಯನ್ನು ಬೇರ್ಪಡಿಸಲು ಹಿಮಾಚಲ ಮಾಡಿಕೊಂಡ ಪ್ಲಾನ್ ಕೈ ಕೊಟ್ಟಿತು. 
  
ಅಂತಿಮವಾಗಿ ಕರುಣ್ ನಾಯರ್ ಆಟ 64 ರನ್ ಗಳಿಗೆ ಸೀಮಿತವಾಯಿತು. ಮಧ್ಯಮ ಕ್ರಮಾಂಕದ ದೇವದತ್ ಶತಕ ವಂಚಿತರಾದರು. 201 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 99 ರನ್ ಬಾರಿಸಿದ ಇವರು ಆರೋರ್ ತೋಡಿದ ಖೆಡ್ಡಾಗೆ ಬಲಿಯಾದರು. 
  
ಉಳಿದಂತೆ ಬಿ.ಆರ್.ಶರತ್ 42, ಅಭಿಮನ್ಯು ಮಿಥುನ್ 22 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಹಿಮಾಚಲ ತಂಡದ ಪರ ರಿಷಿ ಧವನ್ 5, ವೈಭವ್ ಆರೋರ್ ಹಾಗೂ ಮಯಾಂಕ್ ದಗಾರ್ ತಲಾ ಎರಡು ವಿಕೆಟ್ ಕಬಳಿಸಿದರು. 182 ರನ್ ಗಳ ಗುರಿಯನ್ನು ಹಿಂಬಾಲಿಸಿದ ಹಿಮಾಚಲ ತಂಡದ ಆರಂಭವೂ ಕಳಪೆಯಾಗಿತ್ತು. 34 ರನ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಹಿಮಾಚಲ ಮುನ್ನುಗುತ್ತಿದ್ದಾಗ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ರಿಷಿ ಧವನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
  
ಸಂಕ್ಷಿಪ್ತ ಸ್ಕೋರ್

  
ಕರ್ನಾಟಕ ಮೊದಲ ಇನ್ನಿಂಗ್ಸ್ 166
  
ಹಿಮಾಚಲ ಪ್ರದೇಶ ಮೊದಲ ಇನ್ನಿಂಗ್ಸ್ 280
  
ಕರ್ನಾಟಕ ಎರಡನೇ ಇನ್ನಿಂಗ್ಸ್ 296
  
ಹಿಮಾಚಲ ಪ್ರದೇಶ ಎರಡನೇ ಇನ್ನಿಂಗ್ಸ್ 2 ವಿಕೆಟ್ ಗೆ 34

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel