ಸಾಂದರ್ಭಿಕ ಚಿತ್ರ 
ದೇಶ

ದೇಶಾದ್ಯಂತ 1,023 ತ್ವರಿತ ನ್ಯಾಯಾಲಯಗಳ ಸ್ಥಾಪನೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಬಾಕಿ ಇರುವ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ದೇಶಾದ್ಯಂತ 1,023 ವಿಶೇಷ ತ್ವರಿತ ನ್ಯಾಯಾಲಯಗಳನ್ನ ಸ್ಥಾಪಿಸಲು ನಿರ್ಧರಿಸಿದೆ.

ನವದೆಹಲಿ : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಬಾಕಿ ಇರುವ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ದೇಶಾದ್ಯಂತ 1,023 ವಿಶೇಷ ತ್ವರಿತ ನ್ಯಾಯಾಲಯಗಳನ್ನ ಸ್ಥಾಪಿಸಲು ನಿರ್ಧರಿಸಿದೆ.

ಇನ್ನೊಂದೆಡೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ, ಮಕ್ಕಳ ಅಪೌಷ್ಠಿಕತೆಯ ವಿರುದ್ಧ ಹೋರಾಟಕ್ಕೆ ಬಿಲ್ ಮತ್ತು ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹ ಅಧ್ಯಕ್ಷ ಬಿಲ್ ಗೇಟ್ಸ್ ಜೊತೆಗೆ 2019ರ ನ. 18ರಂದು ನವದೆಹಲಿಯಲ್ಲಿ ಭಾರತೀಯ ಪೋಷಣ್ ಕೃಷಿ ಕೋಶವನ್ನು ಸ್ಥಾಪಿಸಿದ್ದಾರೆ.

ಕೇಂದ್ರ ಸರ್ಕಾರವು ರಾಜ್ಯಸರ್ಕಾರಗಳ ಸಲಹೆಯೊಂದಿಗೆ 1023 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಆದಷ್ಟು ಬೇಗ ಸ್ಥಾಪನೆ ಮಾಡಿ ಕಾರ್ಯಾಚರಿಸುವಂತೆ ಮಾಡಲು ನಿರ್ಧರಿಸಿದೆ. ಅದರಲ್ಲೂ ಪೋಸ್ಕೋ ತನಿಖೆಗಳನ್ನು ಕಠಿಣವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಈಗಾಗಲೇ 1023 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಪೈಕಿ 400 ಕೋರ್ಟುಗಳನ್ನು ಸ್ಥಾಪನೆ ಮಾಡಲು ರಾಜ್ಯಗಳೊಂದಿಗೆ ಒಮ್ಮತಕ್ಕೆ ಬರಲಾಗಿದೆ. ಈಗಾಗಲೇ ದೇಶದಾದ್ಯಂತ 704ಕ್ಕೂ ಅಧಿಕ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಕಾರ್ಯಾಚರಣೆ ನಡೆಸುತ್ತಿವೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ