ದೇಶ

ನಾಗಾಲ್ಯಾಂಡ್ ಸ್ಪೀಕರ್ ನಿಧನ: ಪ್ರಧಾನಿ ಮೋದಿ ಸಂತಾಪ

Manjula VN

ಕೊಹಿಮಾ: ಕಾನ್ಸರ್ ರೋಗದಿಂದ ಬಳಲುತ್ತಿದ್ದ ನಾಗಾಲ್ಯಾಂಡ್ ವಿಧಾನಸಭೆ ಸ್ಪೀಕರ್ ವಿಖೊ-ಒ-ಯೊಶು (67) ನಿಧನಹೊಂದಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. 

ವಿಕೋ ಅವರು ಕಲೆದ 1 ವರ್ಷದಿಂದಲೂ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 

ವಿಖೊ ನಾಗಾಲ್ಯಾಂಡ್ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಅವರ ನಿಧನ ನಾಗಾಲ್ಯಾಂಡ್'ಗೆ ತುಂಬಲಾರದ ನಷ್ಟವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. 

SCROLL FOR NEXT