ಲಖನೌ: ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜುಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿರುವ ಅಖಿಲೇಶ್ ಯಾದವ್, ದೇಶದಲ್ಲಿ 25 ಸಾವಿರ ಎಂಬಿಬಿಎಸ್ ಸೀಟುಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನೀಟ್ ಪರೀಕ್ಷೆ ನಡೆಸಲಾಗುತ್ತದೆ. ಈ ಅಂಕಗಳ ಆಧಾರದ ಮೇಲೆ ಪಟ್ಟಿ ತಯಾರಿಸಲಾಗುತ್ತದೆ. ಇದರಲ್ಲಿ ರಾಜ್ಯ ವೈದ್ಯಕೀಯ ಕಾಲೇಜುಗಳಿಗೆ ಇಡುವ ಶೇ, 85 ರಷ್ಟು ಸೀಟುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ.
ಇನ್ನು ಉಳಿಯುವ ಶೇ, 15 ರಷ್ಟು ಸೀಟುಗಳನ್ನು ಕೇಂದ್ರೀಯ ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವ ಕಾಲೇಜುಗಳಲ್ಲಿ 4/1 ರಷ್ಟು ಸೀಟುಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಅನ್ವಯವಾಗುತ್ತದೆ. ಆದರೆ, 3/4 ರಷ್ಟು ಸೀಟುಗಳನ್ನು ಇಟ್ಟಿರುವ ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜಿನಲ್ಲಿ ಹಿಂದುಳಿದ ವರ್ಗಗಳು ಮೀಸಲಾತಿ ನೀಡುತ್ತಿಲ್ಲ ಎಂದು ಯಾದವ್ ಹೇಳಿದ್ದಾರೆ.
ಈ ಕಾರಣದಿಂದಾಗಿ ಪ್ರತಿವರ್ಷ 700 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೀಸಲಾತಿ ಸೌಲಭ್ಯ ಪಡೆಯುತ್ತಿಲ್ಲ. ಈ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸುವಂತೆ ಸಚಿವ ಜಾವಡೇಕರ್ ಅವರನ್ನು ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.