ಪಿ.ಚಿದಂಬರಂ 
ದೇಶ

45 ವರ್ಷಗಳಲ್ಲೇ ಗರಿಷ್ಠ ನಿರುದ್ಯೋಗ ಇರುವಾಗ ಶೇ.7ರಷ್ಟು ಜಿಡಿಪಿ ಹೇಗೆ ಸಾಧ್ಯ: ಚಿದಂಬರಂ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಆಯವ್ಯವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಆಯವ್ಯವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಡಿಸುತ್ತಿದ್ದಾರೆ.
ಇದೇ ವೇಳೆ ಸಂಸತ್ತಿನಲ್ಲಿ ಮಾತನಾಡಿದ  ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ನಿರುದ್ಯೋಗವು ಕಳೆದ 45 ವರ್ಷಗಳಲ್ಲೇ ಗರಿಷ್ಠ ಪ್ರಮಾಣದಲ್ಲಿ ಇರುವಾಗ ದೇಶದ ಆರ್ಥಿಕತೆ (ಜಿಡಿಪಿ) ಶೇ.7ರ ಮಟ್ಟದಲ್ಲಿ ಬೆಳೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 
ಈ ಸಂಬಂದ ಟ್ವೀಟ್ ಮಾಡಿರುವ ಚಿದಂಬರಂ ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿರುವ ಜಿಡಿಪಿ ಸಂಖ್ಯೆ ಬಗ್ಗೆ  ಶಂಕೆ ವ್ಯಕ್ತ ಪಡಿಸಿರುವ ಚಿದಂಬರಂ ಸರ್ಕಾರ ಜಿಡಿಪಿ ಸಂಖ್ಯೆಯನ್ನು ಪರಿಷ್ಕರಿಸುವಾಗ ನಿರುದ್ಯೋಗದ ಸಂಖ್ಯೆಯನ್ನು ಪರಿಷ್ಕರಿಸಲು ಮರೆತಿರುವಂತಿದೆ ಎಂದು ವ್ಯಂಗ್ಯವಾಡಿದರು. 
ದೇಶದಲ್ಲಿನ ನಿರುದ್ಯೋಗವು 2017-18ರಲ್ಲಿ  ಕಳೆದ 45 ವರ್ಷಗಳಲ್ಲೇ ಗರಿಷ್ಠ ಎನ್ನುವಂತೆ ಶೇ.6.1ರ ಪ್ರಮಾಣದಲ್ಲಿ ಇದೆಎಂದು ವರದಿಯಾಗಿದೆ, ಇದರ ನಡುವೆಯೇ ತಾನು ದೇಶದ ಕಾರ್ಮಿಕ ಶಕ್ತಿಯ ಸಮೀಕ್ಷೆಯನ್ನು ಅಂತಿಮಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ನಿನ್ನೆ ಜಿಡಿಪಿ ಸಂಖ್ಯೆಯನ್ನು ಪ್ರಕಟಿಸುವಾಗ ಹೇಳಿತ್ತು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!