ದೇಶ

ಬಂಗಾಳ, ಕೇರಳ ಪೊಲೀಸರ ಜಂಟಿ ಕಾರ್ಯಾಚರಣೆ; ಶಂಕಿತ ಉಗ್ರನ ಬಂಧನ

Srinivasamurthy VN
ಕೊಚ್ಚಿ: ಪಶ್ಚಿಮ ಬಂಗಾಳ ಮತ್ತು ಕೇರಳ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಶಂಕಿತ ಉಗ್ರನೋರ್ವನನ್ನು ಬಂಧಿಸಲಾಗಿದೆ.
ಕೇರಳದ ಮಲಪ್ಪುರಂನಲ್ಲಿ ಶಂಕಿತ ಉಗ್ರ ಅಬ್ದುಲ್ ಮತಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಬ್ದುಲ್ ಮತಿನ್ ಕುರಿತು ಮೊದಲೇ ಮಾಹಿತಿ ಕಲೆಹಾಕಿದ್ದ ಪಶ್ಚಿಮ ಬಂಗಾಳದ ವಿಶೇಷ ಕಾರ್ಯಾಚರಣೆ ಪಡೆ (ಎಸ್ ಟಿಎಫ್)ಸಿಬ್ಬಂದಿಗಳು ಕೇರಳ ಪೊಲೀಸರ ನೆರವು ಪಡೆದು ನಿನ್ನೆ ಅಬ್ದುಲ್ ಮತಿನ್ ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಅಬ್ದುಲ್ ಮತಿನ್ ನನ್ನು ವಶಕ್ಕೆ ಪಡೆದಿರುವ ಪಶ್ಚಿಮ ಬಂಗಾಳ ಪೊಲೀಸರು ರಹಸ್ಯ ಸ್ಥಳದಲ್ಲಿ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು 2014ರಲ್ಲಿ ಪಶ್ಚಿಮ ಬಂಗಾಳದ ಬರ್ದ್ವಾನ್ ನಲ್ಲಿ ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ಅಬ್ದುಲ್ ಮತಿನ್ ಪ್ರಮುಖ ಆರೋಪಿ ಎನ್ನಲಾಗಿದೆ.
SCROLL FOR NEXT