ಬಿಹಾರ: ಲಾಠಿ ಚಾರ್ಜ್ ವೇಳೆ ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ 
ದೇಶ

ಬಿಹಾರ: ಲಾಠಿ ಚಾರ್ಜ್ ವೇಳೆ ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ

ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಮಾಜಿ ಕೇಂದ್ರ ಸಚಿವ ಕುಶ್ವಾಹ ಹಾಗೂ ಅವರ ಪಕ್ಷ ಆರ್ ಎಲ್ಎಸ್ ಪಿ ಕಾರ್ಯಕರ್ತರಿಗೆ ಗಾಯಗಳುಂಟಾಗಿರುವ ಘಟನೆ ಬಿಹಾರ ರಾಜಧಾನಿ

ಪಾಟ್ನಾ: ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಮಾಜಿ ಕೇಂದ್ರ ಸಚಿವ ಕುಶ್ವಾಹ ಹಾಗೂ ಅವರ ಪಕ್ಷ ಆರ್ ಎಲ್ಎಸ್ ಪಿ ಕಾರ್ಯಕರ್ತರಿಗೆ  ಗಾಯಗಳುಂಟಾಗಿರುವ ಘಟನೆ ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ. 
ಬಿಹಾರದಲ್ಲಿ ಶಾಲೆ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಆರ್ ಎಲ್ಎಸ್ ಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಆರ್ ಎಲ್ಎಸ್ ಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. 
ಲಾಠಿ ಚಾರ್ಜ್ ನಲ್ಲಿ ಕುಶ್ವಾಹ ಅವರ ತಲೆ ಹಾಗೂ ಕಲುಗಳಿಗೆ ತೀವ್ರವಾದ ಗಾಯಗಳುಂಟಾಗಿ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಪಕ್ಷದ ವಕ್ತಾರ ಮಾಧವ್ ಆನಂದ್ ಹೇಳಿಕೆ ನೀಡಿದ್ದಾರೆ. 
ಪ್ರತಿಭಟನೆ ವೇಳೆ ಪೊಲೀಸರು ಕುಶ್ವಾಹ ಅವರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ ಎಂದು ಸೂಕ್ತ ಭದ್ರತೆ ಒದಗಿಸದ ಸಿಎಂ ನಿತೀಶ್ ಕುಮಾರ್ ವಿರುದ್ಧ ಪಕ್ಷದ ವಕ್ತಾರ ಮಾಧವ್ ಆನಂದ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?